ಶರಣಪ್ಪ ಕುಂಬಾರ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ಜಿಲ್ಲೆಯ ಕುಷ್ಟಗಿ ತಾಲೂಕಿನ ಹಿರೇಮನ್ನಾಪೂರ ಹೋಬಳಿ ಕಸಾಪ ನೂತನ ಘಟಕದ ಪದಾಧಿಕಾರಿಗಳ ಸೇವಾ ಸ್ವೀಕಾರ, ಕಾರ್ಯಚಟುವಟಿಕೆಗಳು ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ದಿನಾಂಕ 03-10-2022 ರಂದು ಹಮ್ಮಿಕೊಳ್ಳಲಾಗಿದೆ..!
ಸ್ಥಳೀಯ ಶ್ರೀ ಗವಿಸಿದ್ಧೇಶ್ವರ ಪ್ರೌಢ ಶಾಲೆಯಲ್ಲಿ ಜರುಗುವ ಕಾರ್ಯಕ್ರಮದಲ್ಲಿ ಕುಷ್ಟಗಿಯ ಶ್ರೀ ಕರಿಬಸವ ಶಿವಾಚಾರ್ಯ ಮಹಾಸ್ವಾಮಿಗಳು ಸಾನಿಧ್ಯವಹಿಸುವರು. ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕ್ಷೇತ್ರದ ಮಾಜಿ ಶಾಸಕರಾದ ಕೆ.ಶರಣಪ್ಪ, ಹಸನಸಾಬ್ ಹಾಗೂ ದೊಡ್ಡನಗೌಡ ಉಪಸ್ಥಿತಿಯಲ್ಲಿ ಕಸಾಪ ಜಿಲ್ಲಾಧ್ಯಕ್ಷ ಶರಣೇಗೌಡ ಪೊಲೀಸ್ ಪಾಟೀಲ ಅಧ್ಯಕ್ಷತೆವಹಿಸಲಿದ್ದಾರೆ. ಹೋಬಳಿ ಘಟಕದ ಅಧ್ಯಕ್ಷ ವೀರಬಸಯ್ಯ ಕಾಡಗಿಮಠ ಇವರ ನೇತೃತ್ವದಲ್ಲಿ ಜರುಗುವ ಕಾರ್ಯಕ್ರಮದಲ್ಲಿ ಪುಸ್ತಕ ಬಿಡುಗಡೆ, ಸೇವಾ ಹಸ್ತಾಂತರ, ಸೇವಾ ಸ್ವೀಕಾರ ಸೇರಿದಂತೆ ಕನ್ನಡ ತಾಯಿಯ ಹಲವು ಕಾರ್ಯಕ್ರಮಗಳು ಜರುಗಲಿವೆ ಎಂದು ಪ್ರಕಟಣೆ ತಿಳಿಸಿದೆ..!!