ಶರಣಪ್ಪ ಕುಂಬಾರ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಕುಸಿದು ಬಿದ್ದಿರುವ ಜಿಲ್ಲೆಯ ಕುಷ್ಟಗಿಯ ವರದಿಗಾರ ಸಂಗಮೇಶ ಮುಶಿಗೇರಿ ಅವರ ಮನೆಗೆ ಸಂಸದ ಸಂಗಣ್ಣ ಕರಡಿ ಅವರು ಭೇಟಿ ನೀಡಿ, ಪತ್ರಕರ್ತ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವುದಕ್ಕೆ ಅಧಿಕಾರಿಗಳಿಗೆ ಸಲಹೆ ನೀಡಿ ಮಾನವೀಯತೆ ಮೆರೆದಿದ್ದಾರೆ..!
ಈಗಾಗಲೇ ಸಂಪೂರ್ಣ ಮನೆ ಕಳೆದುಕೊಂಡಿರುವ ಕುಟುಂಬಕ್ಕೆ ಜಿಲ್ಲಾಡಳಿತ ಕೂಡಲೇ ಪರಿಹಾರ ಒದಗಿಸಲಿದೆ. ಅಧಿಕಾರಿಗಳಿಗೆ ಈಗಾಗಲೇ ಸೂಚನೆ ಕೂಡಾ ನೀಡಲಾಗಿದೆ. ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಪತ್ರಕರ್ತರಿಗೆ ಸಂದಿಗ್ಧ ಪರಿಸ್ಥಿತಿ ಎದುರಾಗಿರುತ್ತದೆ ಎಂದು ಸಂಸದರು ಅಭಿಪ್ರಾಯವ್ಯಕ್ತಪಡಿಸಿದರು. ಪುರಸಭೆ ಅಧ್ಯಕ್ಷ ಜಿ.ಕೆ.ಹಿರೇಮಠ, ಪತ್ರಕರ್ತರ ಸಂಘದ ತಾಲೂಕಾಧ್ಯಕ್ಷ ಅನೀಲ ಆಲಮೇಲ, ಪತ್ರಕರ್ತ ಸಹೋದ್ಯೋಗಿಗಳಾದ ಪವಾಡೆಪ್ಪ ಚೌಡ್ಕಿ, ರವೀಂದ್ರ ಬಾಕಳೆ, ಬಸವರಾಜ ಪಲ್ಲೇದ, ಭೀಮಸೇನ್ ರಾವ್ ಕುಲಕರ್ಣಿ, ರಮೇಶ ಚಲುವಾದಿ, ಶರಣಪ್ಪ ಲೈನದ ಸೇರಿದಂತೆ ಮುಖಂಡರು ಉಪಸ್ಥಿತರಿದ್ದರು.
ಪರಿಹಾರ : ಭೇಟಿ ನೀಡಿದ ಸಂಸದ ಸಂಗಣ್ಣ ಕರಡಿ ಅವರು ಸ್ಥಳದಲ್ಲೇ ಐದು ಸಾವಿರ ರೂಪಾಯಿಗಳ ಸಹಾಯಧನ ನೀಡಿ ಮಾನವೀಯತೆ ಮೆರೆದಿದ್ದಾರೆ..!!