ಶರಣಪ್ಪ ಕುಂಬಾರ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮಸಾಗರ ಹೊರವಲಯದ ಕುಷ್ಟಗಿ ರಸ್ತೆಯಲ್ಲಿ ಇಬ್ಬರು ಯುವಕರು ಬೈಕ್ ಅಪಘಾತದಲ್ಲಿ ತೀವ್ರ ತರಹವಾಗಿ ಗಾಯಗೊಂಡ ಘಟನೆ ಜರುಗಿದೆ..!
ಗಾಯಗೊಂಡವರನ್ನು ಕುಷ್ಟಗಿ ತಾಲೂಕಿನ ಜೂಲಕಟ್ಟಿ ಗ್ರಾಮದವರು ಎಂದು ಗುರುತಿಸಲಾಗಿದೆ. ಇಬ್ಬರ ತಲೆಗೆ ಬಲವಾದ ಪೆಟ್ಟಾಗಿದೆ. ಸಾವು ಬದುಕಿನ ಮಧ್ಯದಲ್ಲಿದ್ದಾರೆ. ರಸ್ತೆ ದುರುಸ್ತಿ ಹಿನ್ನೆಲೆಯಲ್ಲಿ ರಸ್ತೆಯನ್ನು ಆಳವಾಗಿ ಅಗೆದು ಹಾಗೆಯೇ ಕೈ ಬಿಟ್ಟಿರುವುದು ಘಟನೆಗೆ ಕಾರವಾಗಿದೆ ಎಂದು ಪ್ರತ್ಯಕ್ಷ ದರ್ಶಿಗಳು ಪತ್ರಿಕೆಗೆ ಸ್ಪಷ್ಟಪಡಿಸಿದ್ದಾರೆ..!?