“ಸಿಎಸ್‍ಆರ್ ಎಕ್ಸ್‌ಲೆನ್ಸ್–2022” ಪ್ರಶಸ್ತಿ ಮೂಡಿಗೇರಿಸಿಕೊಂಡ ಕಿರ್ಲೋಸ್ಕರ್ ಫೆರಸ್ ಕಾರ್ಖಾನೆ..!

 

ಶರಣಪ್ಪ ಕುಂಬಾರ

ಕೃಷಿ ಪ್ರಿಯ ನ್ಯೂಸ್ |

ಕೊಪ್ಪಳ : 2022 ನೇ ಸಾಲಿನ ಸಿಎಸ್ ಆರ್ ಎಕ್ಸಲೆನ್ಸ್ ಪ್ರಶಸ್ತಿಯನ್ನು ಕೊಪ್ಪಳದ ಪ್ರಸಿದ್ಧ ಕಿರ್ಲೋಸ್ಕರ್ ಕಾರ್ಖಾನೆ ಮೂಡಿಗೇರಿಸಿಕೊಂಡಿದೆ..!

ದಿನಾಂಕ 12-11-2022ರಂದು ಬೆಂಗಳೂರಿನ ಹೊಟೇಲ್ ಚಾನ್ಸರಿ ಪೆವಿಲಿಯನ್‍ನಲ್ಲಿ
ಮಾನವ ಸಂಪನ್ಮೂಲ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ವೃತ್ತಿನಿರತರು ಜೊತೆಗೂಡಿ ಸ್ಥಾಪಿಸಿದಂತಹ, ಕನ್ನಡಪರ ಕಾಳಜಿ ಇರುವ ನಿರಾತಂಕ ಸಂಸ್ಥೆಯು ಆರನೇ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನದಲ್ಲಿ ಈ ಪ್ರಶಸ್ತಿ ನೀಡಲಾಗಿತು.

ಕೊಪ್ಪಳದ ಕಿರ್ಲೋಸ್ಕರ್ ಫೆರಸ್ ಕಾರ್ಖಾನೆಯು ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ (ಸಿಎಸ್‍ಆರ್) ಕ್ಷೇತ್ರದಲ್ಲಿ ಸಲ್ಲಿಸಿರುವ ಅತ್ಯುತ್ತಮ ಸೇವೆ ಗುರುತಿಸಿ ಸಿಎಸ್‍ಆರ್ ಎಕ್ಸ್‍ಲೆನ್ಸ್ ಪ್ರಶಸ್ತಿಯನ್ನು ನೀಡಲಾಗಿದೆ. ಕಾರ್ಖಾನೆಯ ಮಾನವ ಸಂಪನ್ಮೂಲ ವಿಭಾಗದ ಕಾರ್ಯನಿರ್ವಾಹಕ ಉಪಾಧ್ಯಕ್ಷ ಪಿ. ನಾರಾಯಣ ಈ ಪ್ರಶಸ್ತಿಯನ್ನು ಸ್ವೀಕರಿಸಿದರು.
ಈ ಸಮ್ಮೇಳನದಲ್ಲಿ ಸಮ್ಮೇಳನದ ಅಧ್ಯಕ್ಷರಾಗಿ ಖ್ಯಾತ ಕವಿಗಳಾದ ಪ್ರೊ. ಎಚ್.ಎಸ್.ವೆಂಕಟೇಶಮೂರ್ತಿ, ಮುಖ್ಯ ಅತಿಥಿಗಳಾಗಿ ಹಿರಿಯ ರಂಗಕರ್ಮಿ ಹಾಗೂ ಚಲನಚಿತ್ರ ನಿರ್ದೇಶಕರಾದ ಟಿ.ಎಸ್.ನಾಗಾಭರಣ ಮತ್ತು ಕರ್ನಾಟಕ ಉಚ್ಛ ನ್ಯಾಯಾಲಯದ ಹಿರಿಯ ವಕೀಲ ಎಸ್.ಎನ್.ಮೂರ್ತಿ ಸೇರಿದಂತೆ ರಾಜ್ಯಾದ್ಯಂತ ಇರುವ ಕಂಪನಿಗಳ ಮಾನವ ಸಂಪನ್ಮೂಲ ವಿಭಾಗದ ಅಧಿಕಾರಿಗಳು ಭಾಗವಹಿಸಿದ್ದರು.

ಮಾನವ ಸಂಪನ್ಮೂಲ ಕ್ಷೇತ್ರದಲ್ಲಿ ಅಪಾರ ಅನುಭವ ಇರುವ ಹಿರಿಯ ಮಾನವ ಸಂಪನ್ಮೂಲ ಕಾರ್ಯ ನಿರ್ವಾಹಕರನ್ನು ಸಂದರ್ಶಿಸಿ, ಅವರ ಅನುಭವಗಳನ್ನು ಲೀಡರ್ಸ್ ಟಾಕ್ ಎಂಬ ಪುಸ್ತಕದಲ್ಲಿ ಪ್ರಕಟಿಸಿದ್ದು, ಅದನ್ನು ಈ ಸಮಾರಂಭದಲ್ಲಿ ಬಿಡುಗಡೆ ಮಾಡಲಾಯಿತು. ಕಿರ್ಲೋಸ್ಕರ್ ಫೆರಸ್ ಕಾರ್ಖಾನೆಯ ಮಾನವ ಸಂಪನ್ಮೂಲ ವಿಭಾಗದ ಕಾರ್ಯನಿರ್ವಾಹಕ ಉಪಾಧ್ಯಕ್ಷ ಪಿ.ನಾರಾಯಣ ಅವರು ಸಂಸ್ಥೆ ಬಂದಿರುವ ಪ್ರಶಸ್ತಿ ಕುರಿತು ಹೆಮ್ಮೆ ವ್ಯಕ್ತಪಡಿಸಿದ್ದಾರೆ.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪಿ.ನಾರಾಯಣ ಇವರು ಕಿರ್ಲೋಸ್ಕರ್ ಕಾರ್ಖಾನೆಯು ಕೇವಲ ಉತ್ಪಾದನೆಗೆ ಸೀಮಿತಗೊಳಿಸದೇ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆಯನ್ನು ಯಶಸ್ವಿಯಾಗಿ ನಿಭಾಯಿಸಿಕೊಂಡು ಬರುತ್ತಿದೆ. ಇನ್ನೂ ಹೆಚ್ಚಿನ ಚಟುವಟಿಕೆಗಳನ್ನು ಕೈಗೊಳ್ಳಬೇಕಾಗಿದೆ ಎಂದು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‍ನ ಪರವಾಗಿ ಉಪವ್ಯವಸ್ಥಾಪಕರಾದ ಉದ್ಧವ್ ಕುಲಕರ್ಣಿ ಅವರು ಕೂಡಾ ಪ್ರಶಸ್ತಿ ಹೆಮ್ಮೆ ವ್ಯಕ್ತಪಡಿಸಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ..!!