ಶರಣಪ್ಪ ಕುಂಬಾರ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ಜಿಲ್ಲಾಧಿಕಾರಿಗಳ ನಡೆ ಗ್ರಾಮಗಳ ಕಡೆಗೆ ಕಾರ್ಯಕ್ರಮದ ಹಿನ್ನಲೆಯಲ್ಲಿ ಜಿಲ್ಲೆಯ ಕುಷ್ಟಗಿ ತಾಲೂಕಿನ ಬಾದಿಮನಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯು ಮದುವಣಗಿತ್ತಿಯಂತೆ ಶೃಂಗಾರಗೊಳ್ಳುತ್ತಿದೆ..!
ಶಾಲಾ ಆವರಣದಲ್ಲಿ ಕಾರ್ಯಕ್ರಮ ಆಯೋಜನೆ ಹಿನ್ನಲೆಯಲ್ಲಿ ಶಾಲಾ ಮೈದಾನ ಸೇರಿದಂತೆ ಆವರಣ ಗೋಡೆಗಳು ಬಣ್ಣಗಳಿಂದ ಕಂಗೊಳಿಸುತ್ತಿವೆ. ಶಾಲಾ ಸ್ವಾಗತ ಕಮಾನು ಹಲಗೆ ಮರು ಬಣ್ಣವಾಗುತ್ತಿದೆ. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಈಗಾಗಲೇ ಶಾಲೆಯ ಮೈದಾನವನ್ನು ಸ್ವಚ್ಛಗೊಳಿಸಲಾಗಿದೆ. ತುಮರಿಕೊಪ್ಪ ಗ್ರಾಮ ಪಂಚಾಯಿತಿ ಪಿಡಿಓ ಸೇರಿದಂತೆ ಸಿಬ್ಬಂದಿ ಹಾಗೂ ಶಾಲೆಯ ಸಿಬ್ಬಂದಿ ವರ್ಗ ಮಾತ್ರ ಅವಿರತ ಕಾರ್ಯದಲ್ಲಿ ತೊಡಗಿರುವುದು ಕಂಡು ಬಂದಿದೆ. ಶಾಲೆಯ ಶೃಂಗಾರದಂತೆ ಸಮಾಜದ ಕಟ್ಟಕಡೆಯ ಕುಟುಂಬಗಳ ಸಮಸ್ಯೆಗಳು ಕೂಡಾ ರಾಜ್ಯ ಸರಕಾರದ ಅತ್ಯಂತ ಮಹತ್ವದ ಈ ಕಾರ್ಯಕ್ರಮದಲ್ಲಿ ಬಗೆಹರಿಯಬೇಕಾಗಿರುವುದು ಅವಶ್ಯಕತೆ ಇದೆ..!!