ಕೊಪ್ಪಳಕ್ಕೆ ಸಿದ್ಧರಾಮಯ್ಯ

 

ಶರಣಪ್ಪ ಕುಂಬಾರ

ಕೃಷಿ ಪ್ರಿಯ ನ್ಯೂಸ್ |

ಕೊಪ್ಪಳ : ಮಾಜಿ ಮುಖ್ಯಮಂತ್ರಿ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರು ಖಾಸಗಿ ಕಾರ್ಯಕ್ರಮದ ನಿಮಿತ್ಯ ನ. 20 ರಂದು ಕೊಪ್ಪಳ ಜಿಲ್ಲೆಗೆ ಆಗಮಿಸಲಿದ್ದಾರೆ..!

ಕೊಪ್ಪಳ ತಾಲೂಕಿನ ವನಬಳ್ಳಾರಿ ಗ್ರಾಮದ ಕಾಂಗ್ರೆಸ್ ಮುಖಂಡ ತಾಪಂ ಮಾಜಿ ಸದಸ್ಯ ಹನುಮಪ್ಪ ಅರಿಸನಕೇರಿ ಅವರ ಸಹೋದರನ ಮದುವೆ ಸಮಾರಂಭದಲ್ಲಿ ಸಿದ್ಧರಾಮಯ್ಯ ಅವರು ಭಾಗವಹಿಸುವರು. ಎಂ.ಎಸ್.ಪಿ.ಎಲ್ ವಿಮಾನ ನಿಲ್ದಾಣದಿಂದ ರಸ್ತೆ ಮೂಲಕ ವನಬಳ್ಳಾರಿ ಗ್ರಾಮಕ್ಕೆ ತೆರಳಿದ್ದಾರೆ ಎಂದು ತಿಳಿದುಬಂದಿದೆ..!!