ಶರಣಪ್ಪ ಕುಂಬಾರ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ನಗರದ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ದಿನಾಂಕ 17-11-2022 ರಂದು 29 ವಿದ್ಯಾರ್ಥಿನಿಯರು ಅಸ್ವಸ್ಥತೆಗೊಂಡ ಹಿನ್ನಲೆಯಲ್ಲಿ ಕರ್ತವ್ಯ ಲೋಪವೆಸಗಿದ ಕಾರಣದಿಂದ ವಸತಿ ನಿಲಯದ ಮೇಲ್ವಿಚಾರಕರನ್ನು ಅಮಾನತ್ತುಗೊಳಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಚಿದಾನಂದ ತಿಳಿಸಿದ್ದಾರೆ..!
ಅಸ್ವಸ್ಥಗೊಂಡ ವಿದ್ಯಾರ್ಥಿಯನಿಯರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಚಿಕಿತ್ಸೆ ಬಳಿಕ ವಿದ್ಯಾರ್ಥಿನಿಯರು ಗುಣಮುಖರಾಗಿ ವಸತಿ ನಿಲಯಕ್ಕೆ ಮರಳಿದ್ದಾರೆ. ಪ್ರಕರಣಕ್ಕೆ ಕಾರಣರಾದ ಅಡುಗೆದಾರರನ್ನು ಕೂಡಾ ಬದಲಾಯಿಸಲಾಗಿದೆ ಎಂದು ತಿಳಿದು ಬಂದಿದೆ..!!