ಶರಣಪ್ಪ ಕುಂಬಾರ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ಹಾಸ್ಯ ಕಲಾವಿದ, ಶಿಕ್ಷಕ ಜೀವನಸಾಬ್ ಬಿನ್ನಾಳ (ವಾಲಿಕಾರ್) ಅವರಿಗೆ ಹಂಪಿ ಕನ್ನಡ ವಿಶ್ವ ವಿದ್ಯಾಲಯದ ಜಾನಪದ ಅಧ್ಯಯನ ವಿಭಾಗವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ..!
ಹಂಪಿ ಕನ್ನಡ ವಿಶ್ವವಿದ್ಯಾಲಯದ ಜಾನಪದ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ. ಸತೀಶ್ ಪಾಟೀಲ್ ಅವರ ಮಾರ್ಗದರ್ಶನದಡಿಯಲ್ಲಿ “ಜನಪದ ಸಾಹಿತ್ಯದಲ್ಲಿ ಹಾಸ್ಯದ ನೆಲೆಗಳು” ಎಂಬ ವಿಷಯದ ಸಂಶೋಧನಾ ಪ್ರಬಂಧಕ್ಕೆ ಕುಷ್ಟಗಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಹಾಗೂ ಹಿರಿಯ ಜಾನಪದ ಕಲಾವಿದ ಜೀವನಸಾಬ್ ಬಿನ್ನಾಳ ವಾಲಿಕಾರ್ ಅವರಿಗೆ ವಿವಿ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿತು. ಜೀವನಸಾಬ್ ಅವರು ಮೂಲತಃ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬಿನ್ನಾಳ ಗ್ರಾಮದವರು. ರಾಜ್ಯ ಸೇರಿದಂತೆ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾಸ್ಯ ಕಾರ್ಯಕ್ರಮಗಳನ್ನು ನೀಡಿರುವುದು ಇವರದ್ದು ಇತಿಹಾಸ..!!