ಶರಣಪ್ಪ ಕುಂಬಾರ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಡಾ.ಬಿ.ಆರ್.ಅಂಬೇಡ್ಕರ್ ವಸತಿ (ಪ.ಪಂ) ಶಾಲೆಯ ಕಟ್ಟಡದ ಉದ್ಘಾಟನಾ ಭಾಗ್ಯ ಯಾವಾಗ ಎಂದು ಪಾಲಕರು ಒತ್ತಾಯಿಸುತ್ತಿದ್ದಾರೆ..!
ಕಟ್ಟಡ ನಿರ್ಮಾಣವಾಗಿ ಹಲವು ತಿಂಗಳುಗಳು ಗತಿಸಿದರೂ ಇನ್ನೂ ಬಾಡಿಗೆ ಕಟ್ಟಡದಲ್ಲಿ ಶಾಲೆ ಮುಂದುವರೆದಿದೆ. ಯಾವುದೇ ಮೂಲಭೂತ ಸೌಲಭ್ಯಗಳು ಇಲ್ಲದ ಖಾಸಗಿ ಕಟ್ಟಡದಲ್ಲಿ ವಸತಿ ಶಾಲೆ ಮುಂದುವರೆಸಿರುವುದು ಪಾಲಕರ ಆಕ್ರೋಶಕ್ಕೆ ಕಾರಣವಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ, ಶಾಲೆಯ ಮಕ್ಕಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಪಾಲಕರು ಮನವಿ ಮಾಡಿಕೊಂಡಿದ್ದಾರೆ..!!