ಶರಣಪ್ಪ ಕುಂಬಾರ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ಜಿಲ್ಲೆಯ ಕುಷ್ಟಗಿ ತಾಲೂಕಿನ ಕಡೆಕೊಪ್ಪ ಗ್ರಾಮ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಬೈಕ್ ನಡುವೆ ಜರುಗಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಜರುಗಿದೆ..!
ಸಾವನ್ನಪ್ಪಿದ ಬೈಕ್ ಸವಾರ ಜಾಲಿಹಾಳ ಗ್ರಾಮದ ಪರಮನಗೌಡ ಹನುಮಗೌಡ ಮಾಲಿಪಾಟೀಲ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಕುಷ್ಟಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..!!