ಸಂಗಮೇಶ ಮುಶಿಗೇರಿ/
ಶರಣಪ್ಪ ಕುಂಬಾರ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ಕಾಂಗ್ರೆಸ್ ಪಕ್ಷದಲ್ಲಿ ನನಗೆ ಯಾರ ಸಮರ್ಥನೆ ಬೇಕಾಗಿಲ್ಲ.. ಕಾಂಗ್ರೆಸ್ ಪಕ್ಷದ ಶಿಸ್ತಿನಲ್ಲಿದ್ದೇನೆ. ನಾನು ಯಾವತ್ತು ಒಬ್ಬಂಟಿಯಾಗಿಲ್ಲವೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಸ್ಪಷ್ಟಪಡಿಸಿದರು..!
ಅವರು ಕುಷ್ಟಗಿಗೆ ಭೇಟಿ ನೀಡುವ ಸಮಯದಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ನನ್ನ ಸ್ಟ್ಯಾಂಡ್ ಸರಿಯಾಗಿದೆ. ಯಾರು ನನನ್ನು ಸಮರ್ಥಿಸಿಕೊಳ್ಳುವುದು ಬೇಕಾಗಿಲ್ಲ. ನಾನು ಏನು ಎಂಬುದು ರಾಜ್ಯದ ಜನತೆಗೆ ಗೊತ್ತಿದೆ. ಯಾವ ಕಾಲಕ್ಕೂ ಒಬ್ಬಂಟಿಯಾಗಿಲ್ಲ, ಪಕ್ಷದಲ್ಲಿ ಲಕ್ಷಾಂತರ ಜನ ಕಾರ್ಯಕರ್ತರ ಪಡೆ ಇದೆ. ಮುಂಬರುವ ದಿನಗಳಲ್ಲಿ ಪಕ್ಷದ ಶಕ್ತಿ ಏನು ಎಂಬುದು ಗೊತ್ತಾಗಲಿದೆ. ಬಿಜೆಪಿ ನಾಯಕರು ತಮ್ಮ ಭ್ರಷ್ಟಾಚಾರ ಮುಚ್ಚಿಕೊಳ್ಳುವುದಕ್ಕೆ ಏನೆಲ್ಲಾ ಕಸರತ್ತು ಮಾಡಿಕೊಳ್ಳುತ್ತಿದ್ದಾರೆ. ಕುಕ್ಕರ್ ಬ್ಲಾಸ್ಟ್ ಪ್ರಕರಣ ಶೀಘ್ರದಲ್ಲೇಯೇ ತನಿಖೆ ಮೂಲಕ ಸ್ಪಷ್ಟವಾಗಲಿದೆ ಎಂದರು. ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ, ಶಾಸಕ ಅಮರೇಗೌಡ ಬಯ್ಯಾಪೂರ ಸೇರಿದಂತೆ ಇನ್ನಿತರರು ಇದ್ದರು..!!
