ಜೆ.ಹೆಚ್.ಪಟೇಲರನ್ನು ಸ್ಮರಿಸಬೇಕಾಗಿದೆ : ಸಂಗಣ್ಣ ಕರಡಿ

 

ಶರಣಪ್ಪ ಕುಂಬಾರ

ಕೃಷಿ ಪ್ರಿಯ ನ್ಯೂಸ್ |

ಕೊಪ್ಪಳ : ಕೊಪ್ಪಳ ಜಿಲ್ಲಾ ಉದಯಕ್ಕೆ ಕಾರಣಿಕರ್ತರಾದ ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಹೆಚ್.ಪಟೇಲ ಅವರನ್ನು ರಜತ ಮಹೋತ್ಸವದ ಈ ಸುಸಂದರ್ಭದಲ್ಲಿಂದು ಸ್ಮರಿಸಬೇಕಾಗಿದೆ ಎಂದು ಸಂಸದ ಸಂಗಣ್ಣ ಕರಡಿ ಅಭಿಪ್ರಾಯವ್ಯಕ್ತಪಡಿಸಿದರು..!

ಅವರು ನಗರದ ಪಾನಘಂಟಿ ಕಲ್ಯಾಣಮಂಟಪದಲ್ಲಿ ಕನ್ನಡ ಪ್ರಭ ಹಾಗೂ ಸುವರ್ಣ ನ್ಯೂಸ್ ಹಮ್ಮಿಕೊಂಡಿದ್ದ ಕೊಪ್ಪಳ ಜಿಲ್ಲಾ ರಜತ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಮಾಜದಲ್ಲಿ
ಪತ್ರಕರ್ತರು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕಾಗಿದೆ ಎಂದು ಪತ್ರಕರ್ತರಿಗೆ ಸಲಹೆ ನೀಡಿದರು.
ಕನ್ನಡ ಪ್ರಭ ಹಾಗೂ ಸುವರ್ಣ ನ್ಯೂಸ್ ಸಂಪಾದಕ ರವಿ ಹೆಗಡೆ ಅಧ್ಯಕ್ಷತೆವಹಿದ್ದರು. ಕನ್ನಡ ಪ್ರಭ ಪತ್ರಿಕೆಯ ‘ಕೊಪ್ಪಳ ಜಿಲ್ಲೆಯ ರಜತ ವೈಭವ’ ಕುರಿತಾದ ಸಂಚಿಕೆಯನ್ನು ಬಿಡುಗಡೆಗೊಳಿಸಲಾಗಿತು. ಮಾಜಿ ಸಚಿವ ಬಸವರಾಜ ರಾಯರಡ್ಡಿ, ಶಾಸಕ ಕೆ.ರಾಘವೇಂದ್ರ ಹಿಟ್ನಾಳ, ಬಿಜೆಪಿ ಹಿರಿಯ ಮುಖಂಡ ಸಿ.ವಿ.ಚಂದ್ರಶೇಖರ, ಸರಕಾರಿ ಅಭಿಯೋಜಕ ಬಿ.ಎಸ್.ಪಾಟೀಲ, ಅಖಿಲ ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಮಲ್ಲಿಕಾರ್ಜುನಯ್ಯ, ನಗರ ಸಭೆ ಅಧ್ಯಕ್ಷೆ ಶಿವಗಂಗಾ, ವಾರ್ತಾ ಇಲಾಖೆ ಉಪ ನಿರ್ದೇಶಕ ಮಂಜುನಾಥ ಡೊಳ್ಳಿನ, ಹುಬ್ಬಳ್ಳಿ ಸ್ಥಾನಿಕ ಸಂಪಾದಕ ಮಲ್ಲಿಕಾರ್ಜುನ ಸಿದ್ದಣ್ಣನವರ, ನೌಕರ ಸಂಘದ ರಾಜ್ಯ ಉಪಾಧ್ಯಕ್ಷ ನಾಗರಾಜ ಜುಮ್ಮನ್ನವರ, ವಾಣಿಜ್ಯೋಧ್ಯಮಿ ಶ್ರೀನಿವಾಸ ಗುಪ್ತಾ, ವಕೀಲ ರಾಘವೇಂದ್ರ ಪಾನಘಂಟಿ, ಶಾಸಕಿ ಹೇಮಲತಾ ನಾಯಕ, ಜೆ.ಡಿ.ಎಸ್ ಜಿಲ್ಲಾಧ್ಯಕ್ಷ ವೀರೇಶ ಮಹಾಂತಯ್ಯನಮಠ, ಶಾರದಾ ಸ್ಕೂಲ್ ಅಧ್ಯಕ್ಷ ಪಾಟೀಲ ಸೇರಿದಂತೆ ರಾಜ್ಯದ ಕನ್ನಡ ಪ್ರಭ ವರದಿಗಾರರ ಸಮೂಹ ಕಾರ್ಯಕ್ರಮದಲ್ಲಿ ಭಾಗಿಯಾಗಿತ್ತು. ಕೊಪ್ಪಳ ಜಿಲ್ಲೆಯ ಕನ್ನಡ ಪ್ರಭ ಪತ್ರಿಕೆಯ ಹಿರಿಯ ವರದಿಗಾರ ಸೋಮರಡ್ಡಿ ಅಳವಂಡಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು..!!