ಶರಣಪ್ಪ ಕುಂಬಾರ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ತಾಲೂಕಿನ ತಳಕಲ್ ಗ್ರಾಮದ ಸರಕಾರಿ ಪ್ರೌಢಶಾಲೆಯ 1999-2000ನೇ ಸಾಲಿನ ವಿದ್ಯಾರ್ಥಿಗಳಿಂದ ಡಿ.31 ಶನಿವಾರ ಬೆಳಗ್ಗೆ 9:00 ಗಂಟೆಗೆ ತಳಕಲ್ ಗ್ರಾಮದ ಬಾಲಕರ ಸರಕಾರಿ ಪ್ರೌಢಶಾಲೆಯಲ್ಲಿ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು1999-2000ನೇ ಸಾಲಿನ ವಿದ್ಯಾರ್ಥಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ..!

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿದೇರ್ಶಕರು (ಆಡಳಿತ) ಎಂ.ಎ ರಡೇರ್ ಕಾರ್ಯಕ್ರಮವನ್ನು ಉದ್ಘಾಟಿಸುವರು.
ಯಲಬುರ್ಗಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಥ್ ಕರ್ಣಂ ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು.
ವಿಜಯನಗರ ಜಿಲ್ಲೆಯ ಮುನಿರಾಬಾದ್ ವೃತ್ತದ ಸಿ.ಪಿ.ಐ ವಿಶ್ವನಾಥ ಹಿರೇಗೌಡ್ರ ವಿಶೇಷ ಆಹ್ವಾನಿತರಾಗಿ ಆಗಮಿಸುತ್ತಾರೆ.

ಮುಖ್ಯ ಅತಿಥಿಗಳಾಗಿ ತಳಕಲ್ಲ ಗ್ರಾಮದ ಸರಕಾರಿ ಪದವಿ ಪೂರ್ವ ಕಾಲೇಜ್ ಪ್ರಾಚಾರ್ಯ ಫಕ್ಕೀರಪ್ಪ ವಜ್ರಬಂಡಿ, ಬಾಲಕರ ಸರಕಾರಿ ಪ್ರೌಢ ಶಾಲೆ ಮುಖ್ಯ ಗುರು ಶಂಕರಗೌಡ ಮಾಲಿಪಾಟೀಲ ಆಗಮಿಸುತ್ತಾರೆ ಎಂದು ತಿಳಿಸಿದ್ದಾರೆ..!!

