ಸಂಗಮೇಶ ಮುಶಿಗೇರಿ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ಬೆಳ್ಳಂಬೆಳಗ್ಗೆ ಮಿಂಚಿನ ದಾಳಿ ನಡೆಸಿರುವ ಪೊಲೀಸರು ಭಾರಿ ಮೊತ್ತದ ಅಕ್ರಮ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ 17 ಜನರನ್ನು ಬಂಧಿಸಿ, ಅವರ ಬಳಿಯಿದ್ದ 2,43,600=00 ರೂಪಾಯಿಗಳನ್ನು ವಶ ಪಡಿಸಿಕೊಂಡ ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕಿನ ಚಿಕ್ಕನಂದಿಹಾಳ ಗ್ರಾಮದಲ್ಲಿ ನಡೆದಿದೆ.!
ಗ್ರಾಮದ ಹೊನ್ನಮ್ಮದೇವಿ ದೇವಸ್ಥಾನ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಧ್ಯ ರಾತ್ರಿ ಎರಡು ಗಂಟೆ ಸುಮಾರಿಗೆ ಹದಿನೇಳು ಜನರ ಗುಂಪು ಸಾಮೂಹಿಕವಾಗಿ ಅಂದರ್ ಬಾಹರ್ ಆಟದಲ್ಲಿ ತೊಡಗಿಕೊಂಡಿದ್ದಾರೆ. ಖಚಿತ ಮಾಹಿತಿ ಪಡೆದ ಪಿಎಸ್ ಐ ಮೌನೇಶ ರಾಠೋಡ ಅವರು, ಸಿಬ್ಬಂದಿಯೊಂದಿಗೆ ದಾಳಿ ನಡೆಸಿ ಜೂಜಾಟದಲ್ಲಿ ತೊಡಗಿದವರನ್ನು ಬಂಧಿಸಿ ಇಸ್ಪೀಟ್ ಎಲೆ, ನಗದು ಹಣ ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿತರ ಮೇಲೆ ಗುನ್ನೆ ನಂ.08/2023, ಕಲಂ : 87 ಕೆ.ಪಿ. ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.!!
