ಪಂಚಾಯಿತಿ ಮುಂದೆ ಅಹೋರಾತ್ರಿ ಧರಣಿ..!

 

ಸಂಗಮೇಶ ಮುಶಿಗೇರಿ

ಕೃಷಿ ಪ್ರಿಯ ನ್ಯೂಸ್ |

ಕೊಪ್ಪಳ : ಮನೆಯ ಆಸ್ತಿ ದಾಖಲೆಗಳಿದ್ದರೂ ಕಟ್ಟಡ ಪರವಾನಗಿ ನೀಡಲು ಗ್ರಾಮ ಪಂಚಾಯಿತಿ ಅಧಿಕಾರಿಗಳು ನಿರಾಕರಿಸುತ್ತಿದ್ದಾರೆ ಎಂದು ಆರೋಪಿಸಿ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಳುವಗೇರಾ ಗ್ರಾಮ ಪಂಚಾಯಿತಿ ಕಾರ್ಯಾಲಯದ ಮುಂದೆ ಕುಟುಂಬವೊಂದು ಅಹೋರಾತ್ರಿ ಧರಣಿ ಆರಂಭಿಸಿದೆ..!

 

ತಳುವಗೇರಾ ಗ್ರಾಮದ ಶಿವಪ್ಪ ಬಸಪ್ಪ ಹಿರೇಗಣ್ಣನವರ್ ಎಂಬುವರು ತಮ್ಮ ಕುಟುಂಬದೊಂದಿಗೆ ಗ್ರಾಮ ಪಂಚಾಯಿತಿ ಕಾರ್ಯಾಲಯದ ಮುಂದೆ ಡಾ.ಬಿಆರ್.ಅಂಬೇಡ್ಕರ್ ಹಾಗೂ ಮಹಾತ್ಮಾ ಗಾಂಧೀಜಿ ಅವರ ಭಾವಚಿತ್ರ ಇರಿಸಿ ತಮಗೆ ನ್ಯಾಯ ಸಿಗುವವರೆಗೂ ಈ ಸ್ಥಳ ಬಿಟ್ಟು ಕದಲುವುದಿಲ್ಲ ಎಂದು ಪಟ್ಟು ಹಿಡಿದು ಧರಣಿ ಸತ್ಯಾಗ್ರಹ ಆರಂಭಿಸಿದ ಕುಟುಂಬ ಸದಸ್ಯರು. ಸಧ್ಯ ವಾಸವಿರುವ ಮನೆಯ ಮುಂದೆ ಇರುವ ತಮ್ಮ ಜಾಗೆಯಲ್ಲಿ ತಡೆಗೋಡೆ ಸೇರಿದಂತೆ ಶೌಚಾಲಯ ನಿರ್ಮಿಸಿಕೊಳ್ಳಲು ಪರವಾನಗಿ ನೀಡುವಂತೆ ಗ್ರಾಮ ಪಂಚಾಯಿತಿ ಅಧಿಕಾರಿ ಹಾಗೂ ಸಿಬ್ಬಂದಿ ಮುಂದೆ ಹಲವುಬಾರಿ ಮನವಿ ಮಾಡಿದರೂ ಪರವಾನಗಿ ನೀಡುತ್ತಿಲ್ಲ. ಕಟ್ಟಡ ನಿರ್ಮಾಣಕ್ಕೆ ಆಸ್ಪದ ನೀಡುತ್ತಿಲ್ಲ. ಈ ಕುರಿತು ಮನೆಯ ಖರಿದಿಪತ್ರಗಳೊಂದಿಗೆ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಗಮನಕ್ಕೆ ತರಲಾಗಿದೆ. ನಮ್ಮಲ್ಲಿರುವ ದಾಖಲೆಗಳನ್ನು ಪರಿಶೀಲಿಸಿದ ಅಧಿಕಾರಿಗಳು ಅನುಮತಿ ಸೂಚಿಸಿದ್ದಾರೆ. ಆದರೆ, ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಮಾತ್ರ ನಮಗೆ ನ್ಯಾಯ ನೀಡದೆ ದೌರ್ಜನ್ಯ ಎಸಗುತಿದ್ದಾರೆ ಎಂದು ಆರೋಪಿಸುತ್ತಿರುವ ಕುಟುಂಬ, ನಮಗೆ ನ್ಯಾಯ ಸಿಗುವವರೆಗೂ ಈ ಸ್ಥಳ ಬಿಟ್ಟು ಕದಲುವುದಿಲ್ಲ ಎಂದು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿದೆ..!!