ಸಂಗಮೇಶ ಮುಶಿಗೇರಿ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಜಿಲ್ಲೆಯ ಕುಷ್ಟಗಿ ಪಟ್ಟಣಕ್ಕೆ ಭೇಟಿ ನೀಡಲಿದ್ದಾರೆ..!
ಜನೆವರಿ 30 ರಂದು ಕುಷ್ಟಗಿ ಪಟ್ಟಣದ ಬಸ್ ನಿಲ್ದಾಣದ ಸಮೀಪ ಹಮ್ಮಿಕೊಂಡಿರುವ ಪಂಚರತ್ನ ರಥ ಯಾತ್ರೆಯ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಕುಷ್ಟಗಿ ಕ್ಷೇತ್ರದ ನಿಯೋಜಿತ ಅಭ್ಯರ್ಥಿ ತುಕಾರಾಮ್ ಸುರ್ವೆ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸಿಂಧನೂರು ಮೂಲಕ ಆಗಮಿಸುವ ಕುಮಾರಸ್ವಾಮಿ ಹಾಗೂ ಪಕ್ಷದ ಮುಖಂಡರ ದಂಡು ಕ್ಷೇತ್ರದ ತಾವರಗೇರಾ ಪಟ್ಟಣದಿಂದ ಹಮ್ಮಿಕೊಂಡಿದ್ದ ಬೈಕ್ ರಾಲಿಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಕುಷ್ಟಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಎರಡು ರಾಷ್ಟ್ರೀಯ ಪಕ್ಷಗಳ ಆಡಳಿತ ಬೇಸತ್ತಿರುವ ಕ್ಷೇತ್ರದ ಜನತೆ ಜೆಡಿಎಸ್ ಪಕ್ಷ ಸೇರ್ಪಡೆಗೊಳ್ಳುತ್ತಿದ್ದಾರೆ. ಈಗಾಗಲೇ ಕ್ಷೇತ್ರದ ತುಂಬೆಲ್ಲಾ ಸಂಚರಿಸಿ, ಜನತೆಯ ನಾಡಿಮಿಡಿತ ಅರಿಯಲಾಗಿದೆ. ಈ ಬಾರಿ ಕ್ಷೇತ್ರದ ಮತದಾರ ಪ್ರಭುಗಳು ಜೆಡಿಎಸ್ ಪಕ್ಷಕ್ಕೆ ಅಧಿಕಾರ ನೀಡಲಿದ್ದಾರೆ ಎಂಬುದಾಗಿ ಭರವಸೆವ್ಯಕ್ತಪಡಿಸಿದರು. ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಮ್, ಮಾಜಿ ಸಚಿವರಾದ ಬಂಡೆಪ್ಪ ಕಾಶಂಪೂರ, ವೆಂಕಟರಾವ್ ನಾಡಗೌಡ ಸೇರಿದಂತೆ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು. ಜೆಡಿಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಶಾಮಿದ್ ಸಾಬ್ ಗಂಧದ ಎಣ್ಣಿ, ರಾಜ್ಯ ಕಾರ್ಯಕಾರಿಣಿ ಸದಸ್ಯ ಶರಣಪ್ಪ ಕುಂಬಾರ, ರಾಜ್ಯ ಕಾರ್ಯದರ್ಶಿ ವೀರೇಶ ನಿಡಗುಂದಿಮಠ, ತಾಲೂಕಾಧ್ಯಕ್ಷ ನಾಗರಾಜ ತಳವಾರ ಸೇರಿದಂತೆ ಜೆಡಿಎಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು..!!
(ಪ್ರಾಯೋಜಿತ ಸುದ್ದಿ..)

