ಶರಣಪ್ಪ ಕುಂಬಾರ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ಜಿಲ್ಲೆಯ ಕುಷ್ಟಗಿ ತಹಸೀಲ್ದಾರ ಎಂ.ಗುರುರಾಜ ಅವರನ್ನು ಬಳ್ಳಾರಿ ಜಿಲ್ಲೆಯ ಕುರುಗೊಡ ತಹಸೀಲ್ದಾರ ಕಚೇರಿಗೆ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ..!
(ಕುಷ್ಟಗಿ ತಹಸೀಲ್ದಾರರಾಗಿ ನಿಯೋಜನೆಗೊಂಡಿರುವ ಆರ್.ರಾಘವೇಂದ್ರರಾವ್)
ವಿಧಾನಸಭಾ ಚುನಾವಣೆ-2023 ಹಿನ್ನೆಲೆಯಲ್ಲಿ ಚುನಾವಣೆ ಆಯೋಗದ ಮಾರ್ಗಸೂಚಿ ಅನ್ವಯ ಆಡಳಿತಾತ್ಮಕ ಹಿತದೃಷ್ಟಿಯಿಂದ ವರ್ಗಾವಣೆಗೊಳಿಸಲಾಗಿದೆ. ಕುಷ್ಟಗಿ ತಹಸೀಲ್ದಾರ ಸೇರಿದಂತೆ ರಾಜ್ಯದ 76 ಜನ ತಹಶಿಲ್ದಾರರನ್ನು ಕಂದಾಯ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಜಿ.ಎನ್.ಸುಶೀಲ್ ಅವರು ಆದೇಶ ಹೊರಡಿಸಿದ್ದಾರೆ..!!


