ಶರಣಪ್ಪ ಕುಂಬಾರ
ಕೃಷಿ ಪ್ರಿಯ ನ್ಯೂಸ್ |
ವಿಜಯಪುರ (ಕೊಪ್ಪಳ) :
ವಿಜಯಪುರದಲ್ಲಿ ಫೆಬ್ರವರಿ 4 ಮತ್ತು 5 ರಂದು ಜರುಗುವ 37 ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದಾರೆ..!
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಬೆಂಗಳೂರು ಹಾಗೂ ಜಿಲ್ಲಾ ಘಟಕ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ ಜರಗುವ ಈ ವಿಶಿಷ್ಟ ಸಮ್ಮೇಳನದಲ್ಲಿ ಜ್ಞಾನಯೋಗಾಶ್ರಮದ ಶ್ರೀ ಬಸವಲಿಂಗ ಮಹಾಸ್ವಾಮಿಗಳು ದಿವ್ಯ ಸಾನಿಧ್ಯವಹಿಸಿಕೊಳ್ಳುವರು. ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸುವರು. ಬೃಹತ್ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ವ್ಯಂಗ್ಯ ಚಿತ್ರ ಪ್ರದರ್ಶನ ಉದ್ಘಾಟಿಸಲಿದ್ದಾರೆ.

ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸುವರು. ಶಾಸಕ ಬಸನಗೌಡ ಪಾಟೀಲ ಯತ್ನಾಳ ವಸ್ತು ಪ್ರದರ್ಶನ ಉದ್ಘಾಟಿಸಲಿದ್ದಾರೆ. ಅಲ್ಲದೆ, ಸಚಿವರ ದಂಡು ಕಾರ್ಯಕ್ರಮಕ್ಕೆ ಆಗಮಿಸಲಿದೆ.
ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆವಹಿಸುವರು. ಅಖಿಲ ಭಾರತ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ ಅವರು ಕೂಡಾ ಕಾರ್ಯಕ್ರಮದಲ್ಲಿ ಭಾಗವಹಿಸುವರು..!!





