ಕೊಪ್ಪಳದಲ್ಲಿ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ..!

 

ಶರಣಪ್ಪ ಕುಂಬಾರ

ಕೃಷಿ ಪ್ರಿಯ ನ್ಯೂಸ್ |

ಕೊಪ್ಪಳ : ನಗರದ ಹೃದಯ ಭಾಗದಲ್ಲಿರುವ ತೋಟಗಾರಿಕೆ ಇಲಾಖೆ ಆವರದಣಲ್ಲಿ ದಿನಾಂಕ 16-02-2023 ರಿಂದ 19-02-2023 ರ ವರೆಗೆ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಹಮ್ಮಿಕೊಳ್ಳಲಾಗಿದೆ..!

ದ್ರಾಕ್ಷಿ, ಕಲ್ಲಂಗಡಿ, ಪೇರಲ, ಕರಬೂಜ, ಅಂಜೂರ ಹಾಗೂ ಜೇನು ಪ್ರದರ್ಶನದ ಜೊತೆಗೆ ಮಾರಾಟ ಹಮ್ಮಿಕೊಳ್ಳಲಾಗಿದೆ. ರೈತರಿಂದ ನೇರವಾಗಿ ಮಾರಾಟ ಜರಗುವ ಈ ಮೇಳದಲ್ಲಿ ಯಾವುದೇ ತರಹದ ದಲ್ಲಾಳಿ ಉಳಿತಾಯವಾಗಲಿದೆ. ಜೊತೆಗೆ ಉತ್ತಮ ಗುಣಮಟ್ಟದ ಹಣ್ಣುಗಳು ದೊರಕಲಿವೆ.

ಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ಹಮ್ಮಿಕೊಂಡಿರುವ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳದ ಸದುಪಯೋಗಪಡಿಸಿಕೊಳ್ಳುವಂತೆ ಇಲಾಖೆ ಉಪ ನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ..!!