ಸಂಗಮೇಶ ಮುಶಿಗೇರಿ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ಪ್ರಸಕ್ತ ವರ್ಷ ಕಡಲೆ ಬೆಳೆ ಉತ್ತಮವಾಗಿ ಬೆಳೆದಿದ್ದು, ರೈತರಿಗೆ ಆರ್ಥಿಕವಾಗಿ ಅನುಕೂಲ ಕಲ್ಪಿಸಲು ರಾಜ್ಯ ಸರ್ಕಾರ ಕಡಲೆಗೆ ಬೆಂಬಲ ಬೆಲೆ ನಿಗದಿಪಡಿಸಿ ಖರೀದಿ ಕೇಂದ್ರ ತೆರೆಯಲು ಆದೇಶಿಸಿದೆ..!

ಜಿಲ್ಲೆಯ ಕುಷ್ಟಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ನೀಲಪ್ಪ ಶೆಟ್ಟಿ ಅವರು ಪಟ್ಟಣದಲ್ಲಿ ಬೆಂಬಲ ಬೆಲೆಯ ಕಡಲೆ ಖರೀದಿ ಕೇಂದ್ರ ತೆರೆಯುವ ಕುರಿತು ಮಾಹಿತಿ ನೀಡಿದ್ದಾರೆ. ಕ್ವಿಂಟಾಲಿಗೆ 5,355 ರೂಪಾಯಿ ಬೆಲೆ ನಿಗದಿಪಡಿಸಲಾಗಿದೆ. ಒಬ್ಬ ರೈತನಿಂದ ನಾಲ್ಕು ರಿಂದ ಹದಿನೈದು ಕಿಂಟಲ್ ವರೆಗೆ ಮಾತ್ರ ಕಡಲೆ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ತಾಲೂಕಿನಲ್ಲಿ ಶೀಘ್ರದಲ್ಲೇ ಖರೀದಿ ಕೇಂದ್ರ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ..!!
