ಕಾಮಗಾರಿಗಳ ಲೋಪಕ್ಕೆ ಅಧಿಕಾರಿಗಳ ಮೇಲೆ ಕಠಿಣ ಕ್ರಮ : ಸಿಇಓ ರಾಹುಲ್ ಪಾಂಡೆ..!

 

ಸಂಗಮೇಶ ಮುಶಿಗೇರಿ

ಕೃಷಿ ಪ್ರಿಯ ನ್ಯೂಸ್ |

ಕೊಪ್ಪಳ : ಜಿಪಂ ಅಡಿಯಲ್ಲಿ ನಡೆಯುವ ಯಾವುದೇ ಕಾಮಗಾರಿಗಳಿರಲಿ ಲೋಪಗಳನ್ನು ಸಹಿಸಲಾಗದು. ಮಾಧ್ಯಮಗಳ ಅಥವಾ ಸಾರ್ವಜನಿಕರ ಮೂಲಕ ದೂರುಗಳು ಬಂದಲ್ಲಿ ತಕ್ಷಣವೇ ಸಂಬಂಧಿಸಿದ ಇಲಾಖೆ ಅಧಿಕಾರಿಗಳ ಮೂಲಕ ಪರಿಶೀಲನೆ ನಡೆಸಲಾಗುವದು. ಅವರು ನೀಡುವ ವರದಿ ಆಧರಿಸಿ ಲೋಪವೆಸಗಿದವರ ವಿರುದ್ಧ ಎಫ್.ಐ.ಆರ್ ದಾಖಲಿಸಲು ಹಿಂಜರಿಯುವುದಿಲ್ಲ ಎಂದು ಜಿ ಪಂ ಸಿಇಓ ರಾಹುಲ್ ರತ್ನಂ ಪಾಂಡೆ ಅವರು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು..!

ಜಿಲ್ಲೆಯ ಕುಷ್ಟಗಿ ತಾಲೂಕು ಪಂಚಾಯಿತಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಪತ್ರಕರ್ತರ ಪ್ರಶ್ನೆಗೆ ಸಿಇಓ ಅವರು ಉತ್ತರಿಸಿದರು. ಪ್ರಧಾನಮಂತ್ರಿ ಮಹತ್ವಾಕಾಂಕ್ಷಿ ಯೋಜನೆ ಜಲಜೀವನ ಮಿಷನ್ ಸೇರಿದಂತೆ ನರೇಗಾ ಮತ್ತಿತರ ಪ್ರಮುಖ ಯೋಜನೆಗಳ ಕಾಮಗಾರಿಗಳ ಕಳಪೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಎಸ್ಸೆಸ್ಸೆಲ್ಸಿ ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವದಲ್ಲಿ ಅವರಿಗೆ ಭಯ ಹೋಗಲಾಡಿಸಲು ಆತ್ಮ ಸ್ಥೈರ್ಯ ತುಂಬುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಸಂಬಂಧಿಸಿದ ಡಿಡಿಪಿಐ ಅವರೊಂದಿಗೆ ಸಮಾಲೋಚನೆ ನಡೆಸುವುದಾಗಿ ಮಾಧ್ಯಮದವರಿಗೆ ಸ್ಪಷ್ಟಪಿಸಿದರು..!!