33 ಲಕ್ಷ ಹಣ ದುರಪಯೋಗ ಕೃಷಿ ಅಧಿಕಾರಿ ಅಮಾನತ್ತು..!

 

ಶರಣಪ್ಪ ಕುಂಬಾರ

ಕೃಷಿ ಪ್ರಿಯ ನ್ಯೂಸ್ |

ಕೊಪ್ಪಳ : ಜಿಲ್ಲೆಯ ಕುಷ್ಟಗಿ ರೈತ ಸಂಪರ್ಕ ಕೇಂದ್ರದ ಅಧಿಕಾರಿ ರಾಘವೇಂದ್ರ ಕೊಂಡಗುರಿ ಅವರನ್ನು ಹಣ ದುರುಪಯೋಗದ ಹಿನ್ನೆಲೆಯಲ್ಲಿ ಅಮಾನತ್ತುಗೊಳಿಸಿ ಕೃಷಿ ಇಲಾಖೆ ಆದೇಶ ಹೊರಡಿಸಿದೆ..!

ಕಳೆದ ವರ್ಷದ ಮುಂಗಾರು ಮತ್ತು ಹಿಂಗಾರು ಬೀಜ ಮಾರಾಟದ ಹಣ ದುರುಪಯೋಗ ಆಗಿರುವ ಬಗ್ಗೆ ತನಿಖೆ ವೇಳೆ ತಿಳಿದು ಬಂದಿರುವುದು ಅಮಾನತ್ತಿಗೆ ಕಾರಣವಾಗಿದೆ. ಅಧಿಕಾರಿ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹಿರೇಅರಳಿಹಳ್ಳಿ ಗ್ರಾಮದವರಾಗಿದ್ದಾರೆ. ಕೃಷಿ ಇಲಾಖೆ, ಶಿಸ್ತು ಪ್ರಾಧಿಕಾರದ ಆಯುಕ್ತ ಶರತ್.ಬಿ ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಅಧಿಕಾರಿ ಈ ಹಿಂದೆ ಕೆಲ ದಿನಗಳ ಕಾಲ ನಾಪತ್ತೆಯಾಗಿ ಪತ್ತೆಯಾಗಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ..!!