ಶರಣಪ್ಪ ಕುಂಬಾರ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ಕೊಪ್ಪಳ ಏತ ನೀರಾವರಿ ಯೋಜನೆ ಜಾರಿಗೆ ತರುವಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುರುಡೆ ಬಿಟ್ಟಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಆರೋಪವ್ಯಕ್ತಡಿಸಿದರು..!
ಅವರು ಜಿಲ್ಲೆಯ ಕುಷ್ಟಗಿ ಪಟ್ಟಣದಲ್ಲಿ ‘ವಿಜಯ ಸಂಕಲ್ಪ ಯಾತ್ರೆ’ಯಲ್ಲಿ ಭಾಗವಹಿಸಿ ಮಾತನಾಡಿದರು. ಈ ಭಾಗದ ನೀರಾವರಿಯ ಅತ್ಯಂತ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಕೊಪ್ಪಳ ಏತ ನೀರಾವರಿ ಯೋಜನೆಗೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸುಳ್ಳು ಹೇಳಿಕೊಂಡು ಹಣ ಬಿಡುಗಡೆಗೊಳಿಸದೆ, ಸುಮ್ಮನೆ ಬುರುಡೆ ಬಿಡುತ್ತಾ.. ಹಣ ಬಿಡುಗಡೆಗೆ ಮುಂದಾಗದೆ, ಕಾಲ ಹರಣ ಮಾಡಿದರು ಎಂದು ವಿರೋಧವ್ಯಕ್ತಪಡಿಸಿದರು. ದೇಶದಲ್ಲಿ ಡಬಲ್ ಇಂಜಿನ್ ಸರಕಾರ ಜಾರಿಗೆ ಬರಬೇಕು. ಮನೆ ಹಾಳು ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳಿಸಬೇಕು. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತನ್ನಿ ಎಂದು ಸಿಟಿ ರವಿ ಮನವಿ ಮಾಡಿಕೊಂಡರು. ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್, ಸಂಸದ ಸಂಗಣ್ಣ ಕರಡಿ, ಸಚಿವರಾದ ಬಿ. ಶ್ರೀರಾಮಲು, ಹಾಲಪ್ಪ ಆಚಾರ ಸೇರಿದಂತೆ ಇನ್ನಿತರರು ಯಾತ್ರೆಯಲ್ಲಿ ಭಾಗವಹಿಸಿದ್ದರು..!!