ಶರಣಪ್ಪ ಕುಂಬಾರ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ಕೊಪ್ಪಳ ಜಿಲ್ಲೆಯ ರಜತ ಮಹೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ಅನುಪಸ್ಥಿತಿ ಮಾತ್ರ ಎದ್ದು ಕಾಣುತ್ತಿತ್ತು..!
ಇಡೀ ಜಿಲ್ಲಾ ಕ್ರೀಡಾಂಗಣವೇ ಜನ ಸಾಗರದಿಂದ ಕೂಡಿತ್ತು. ಜಿಲ್ಲೆಗೆ 25 ವರ್ಷ ತುಂಬಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಬೆಳ್ಳಿ ಮಹೋತ್ಸವದ ಬೃಹತ್ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಪ್ರವಾಸೋದ್ಯಮ ಸಚಿವ ಆನಂದ ಸಿಂಗ್ ಮಾತ್ರ ಏಲ್ಲಿಯೂ ಕಾಣಿಸಿಕೊಳ್ಳಲಿಲ್ಲ. ಜಿಲ್ಲೆಯ ಜನರ ಇಂತಹ ಸಂಭ್ರಮದಲ್ಲಿ ಏತಕ್ಕೆ ಆನಂದ ಸಿಂಗ್ ಭಾಗವಹಿಸಿಲ್ಲ ಎಂಬ ಇತ್ಯಾದಿ ಆರೋಪದ ಮಾತುಗಳು ಕೇಳಿ ಬಂದವು..!!
ಸಚಿವರ ಸ್ಪಷ್ಟನೆ : ಜಿಲ್ಲಾ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಿಲ್ಲ. ತಾಂತ್ರಿಕ ಕಾರಣಗಳಿಂದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಿಲ್ಲವೆಂದು ಸ್ವತಃ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ಕುಷ್ಟಗಿಗೆ ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡು ಸರ್ಕಿಟ್ ಹೌಸ್ ನಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಸ್ಪಷ್ಟನೆ ನೀಡಿದ ಪ್ರಸಂಗ ಜರುಗಿತು..!