ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ರಾಜ್ಯದಲ್ಲಿ 130 ರಿಂದ 140 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಭರವಸೆವ್ಯಕ್ತಪಡಿಸಿದರು..!
ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮಸಾಗರದಲ್ಲಿ ಹಮ್ಮಿಕೊಂಡಿದ್ದ ಎಸ್.ಟಿ ಮೊರ್ಚಾ ಸಮಾವೇಶದ ಬಳಿಕ ‘ಕೃಷಿ ಪ್ರಿಯ’ ಪತ್ರಿಕೆಗೆ ಪ್ರತಿಕ್ರಿಯೆ ನೀಡಿದರು. ಪಕ್ಷ ಮತ್ತು ಆರ್.ಎಸ್.ಎಸ್ ಆಂತರಿಕ ಸಮೀಕ್ಷೆ ಬಗ್ಗೆ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಆಡಳಿತಕ್ಕೆ ಬರಲಿದೆ ಎಂಬ ಆತ್ಮ ವಿಶ್ವಾಸವಿದೆ ಎಂದರು. ಇದಕ್ಕೂ ಮೊದಲು ವೇದಿಕೆ ಮೇಲೆ ಮಾತನಾಡಿದ ಅವರು ನುಡಿದಂತೆ ನಡೆಯುವ ತಾಕತ್ತು ಬಿಜೆಪಿಗೆ ಮಾತ್ರ ಇದೆ. ಜಿಲ್ಲೆಯಲ್ಲಿ ಪ್ರಜ್ಞಾವಂತ ಮತದಾರರು ಇದ್ದಾರೆ. ಆ ಹಿನ್ನೆಲೆಯಲ್ಲಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿನ ನಗೆ ಬಿರಲಿದ್ದಾರೆ ಎಂದು ಹೇಳಿದರು..!