ಕೊಪ್ಪಳ ಪ್ರಾದೇಶಿಕ ಸಾರಿಗೆ ಕಚೇರಿಯ ನೂತನ ಕಟ್ಟಡ ಉದ್ಘಾಟನೆ..!

 

ಶರಣಪ್ಪ ಕುಂಬಾರ

ಕೃಷಿ ಪ್ರಿಯ ನ್ಯೂಸ್ |

ಕೊಪ್ಪಳ : ನಗರದ ಹೆಚ್.ಕೆ.ಪಾಟೀಲ್ ಲೇಔಟ್ ನಲ್ಲಿ ನೂತನವಾಗಿ ನಿರ್ಮಿಸಿದ ಕೊಪ್ಪಳ ಪ್ರಾದೇಶಿಕ ಸಾರಿಗೆ ಕಚೇರಿಯ ನೂತನ ಕಟ್ಟಡವು ದಿನಾಂಕ 26-03-2023 ರಂದು ರವಿವಾರ ಲೋಕಾರ್ಪಣೆಗೊಳ್ಳಲಿದೆ..!

ಸಾರಿಗೆ ಸಚಿವ ಶ್ರೀರಾಮಲು ಅವರು ಆರ್.ಟಿ.ಓ ನೂತನ ಕಚೇರಿಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಸೇರಿದಂತೆ ಗಣಿ ಸಚಿವ ಹಾಲಪ್ಪ ಆಚಾರ್ಯ ಹಾಗೂ ಜಿಲ್ಲೆಯ ಎಲ್ಲಾ ಶಾಸಕರು, ನಗರಸಭೆ ಅಧ್ಯಕ್ಷರು ಹಾಗೂ ಚುನಾಯಿತ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಕೊಪ್ಪಳ ಪ್ರಾದೇಶಿಕ ಸಾರಿಗೆ ಅಧಿಕಾರಿ ಎಲ್.ಬಿ.ನಾಲವರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ..!