ಸಂಗಮೇಶ ಮುಶಿಗೇರಿ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ಆರ್ ಎಂ ಎಸ್ ಸಿ ಪರೀಕ್ಷೆ ಬರೆಯಲು ಆಗಮಿಸಿದ ವಿದ್ಯಾರ್ಥಿಗಳ ಮೇಲೆ ಜೇನುನೊಣಗಳು ದಾಳಿ ಮಾಡಿದ ಘಟನೆ ಜಿಲ್ಲೆಯ ಕುಷ್ಟಗಿ ಪಟ್ಟಣದಲ್ಲಿ ಜರುಗಿದೆ..!
ಇಲ್ಲಿಯ ಕ್ರೈಸ್ತ ದ ಕಿಂಗ್ ಶಾಲೆಯಲ್ಲಿ ತೆರೆಯಲಾಗಿರುವ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ಜರುಗಿದೆ. ಪಟ್ಟಣ ಸೇರಿದಂತೆ ತಾಲೂಕಿನ ಹಿರೇಮನ್ನಾಪೂರ, ತಳುವಗೇರಾ, ನಿಡಶೇಸಿ ಸೇರಿದಂತೆ ವಿವಿಧ ಗ್ರಾಮಗಳಿಂದ ವಿದ್ಯಾರ್ಥಿಗಳು ಪಾಲಕರೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಘಟನೆ ಜರುಗಿದೆ.
ಸುಮಾರು ಐವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಜೇನುನೊಣಗಳು ದಾಳಿ ಮಾಡಿವೆ ಎಂದು ಹೇಳಲಾಗುತ್ತಿದೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳು ಒಳಗೊಂಡ ಎಂಟತ್ತು ಜನ ಪಾಲಕರು ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತಿದ್ದಾರೆ.
ಶಾಲೆಯ ಆವರಣದಲ್ಲಿ ಬೆಳೆದ ಗಿಡಮರಗಳಲ್ಲಿ ಜೇನುನೊಣಗಳು ವಾಸವಾಗಿದ್ದು ಏಕಾಏಕಿ ಮಕ್ಕಳು ಹಾಗೂ ಪಾಲಕರ ಮೇಲೆ ದಾಳಿ ಮಾಡಿವೆ. ಆದರೆ, ದಾಳಿಗೆ ಕಾರಣ ತಿಳಿದು ಬಂದಿಲ್ಲ. ಘಟನೆಯಿಂದ ವಿದ್ಯಾರ್ಥಿಗಳಲ್ಲಿ ಆತಂಕ ಉಂಟಾಗಿದ್ದು ಕಂಡುಬಂದಿತು..!!