ಬೈಕ್ ಮುಖಾಮುಖಿ ಇಬ್ಬರಿಗೆ ತೀವ್ರ ಗಾಯ..!

 

ಸಂಗಮೇಶ ಮುಶಿಗೇರಿ

ಕೃಷಿ ಪ್ರಿಯ ನ್ಯೂಸ್ |

ಕೊಪ್ಪಳ : ಜಿಲ್ಲೆಯ ಕುಷ್ಟಗಿ ಪಟ್ಟಣದ ವಾಸವಿ ದೇವಸ್ಥಾನದ ಬಳಿ ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸವಾರರಿಬ್ಬರು ತೀವ್ರ ಗಾಯಗೊಂಡಿರುವ ಘಟನೆ ಜರುಗಿದೆ..!

ಪಟ್ಟಣದ ಬೀರಪ್ಪ ಕಲಾಲಬಂಡಿ ಹಾಗೂ ಯಮನೂರಪ್ಪ ಚೂರಿ ತೀವ್ರ ಗಾಯಗೊಂಡವರು ಎಂದು ಗುರುತಿಸಲಾಗಿದೆ. ಮುಖ ಭಾಗಕ್ಕೆ ತೀವ್ರ ಗಾಯಗೊಂಡಿರುವ ಇಬ್ಬರಿಗೆ ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಬೀರಪ್ಪ ಕಲಾಲಬಂಡಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ..!!