ಕೊಪ್ಪಳ ಜಿಲ್ಲೆಯಲ್ಲಿ 23341 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಎದುರಿಸಲಿದ್ದಾರೆ..!

 

ಶರಣಪ್ಪ ಕುಂಬಾರ

ಕೃಷಿ ಪ್ರಿಯ ನ್ಯೂಸ್ |

ಕೊಪ್ಪಳ : ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು 79 ಪರೀಕ್ಷಾ ಕೇಂದ್ರಗಳಲ್ಲಿ 23341 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದರಲ್ಲಿ 11597 ಬಾಲಕರು ಮತ್ತು 11744 ಬಾಲಕಿಯರು ಪರೀಕ್ಷೆ ಬರೆಯಲಿದ್ದಾರೆ..!

ದಿನಾಂಕ 31-03-2023 ರಿಂದ 15-04-2023 ರವರೆಗೆ ಜರಗುವ ಪರೀಕ್ಷೆಯಲ್ಲಿ ಕುಷ್ಟಗಿ ತಾಲೂಕಿನಲ್ಲಿ 4675, ಗಂಗಾವತಿ ತಾಲ್ಲೂಕಿನಲ್ಲಿ 7829, ಕೊಪ್ಪಳ ತಾಲ್ಲೂಕಿನಲ್ಲಿ 6005 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 4832 ವಿದ್ಯಾರ್ಥಿಗಳು ತಮ್ಮ ಪರೀಕ್ಷೆ ಎದುರಿಸುವರು. ಜಿಲ್ಲೆಯ ಒಟ್ಟು 79 ಪರೀಕ್ಷಾ ಕೇಂದ್ರಗಳಲ್ಲಿ 3 ಪರೀಕ್ಷಾ ಕೇಂದ್ರಗಳನ್ನು ಸೂಕ್ಷ್ಮ ಕೇಂದ್ರಗಳೆಂದು ಗುರುತಿಸಲಾಗಿದೆ. ಕೊಠಡಿವೊಂದರಲ್ಲಿ 24 ವಿದ್ಯಾರ್ಥಿಗಳಿಗೆ ಸೀಮಿತಗೊಳಿಸಲಾಗಿದೆ. ಕೊರೋನಾ ವೈರಸ್ ಹರಡುವ ಮುನ್ನೆಚ್ಚರಿಕೆ ಜೊತೆಗೆ ಅಂತರ ಕಾಪಾಡಿಕೊಳ್ಳುವ ಹಿನ್ನೆಲೆಯಲ್ಲಿ ಕಳೆದ ವರ್ಷದ ಪರೀಕ್ಷೆಯಲ್ಲಿ ಕೊಠಡಿವೊಂದರಲ್ಲಿ 20 ವಿದ್ಯಾರ್ಥಿಗಳಿಗೆ ಸೀಮಿತಗೊಳಿಸಲಾಗಿತ್ತು..!!