ನಾಪತ್ತೆಯಾದ ಯುವತಿ..!

 

ಸಂಗಮೇಶ ಮುಶಿಗೇರಿ

ಕೃಷಿ ಪ್ರಿಯ ನ್ಯೂಸ್ |

ಕೊಪ್ಪಳ : ಜಿಲ್ಲೆಯ ಕುಷ್ಟಗಿ ತಾಲೂಕಿನ ಕಂದಕೂರು ಗ್ರಾಮದ ಯುವತಿಯೊಬ್ಬಳು ಕಾಣೆಯಾಗಿರುವ ಬಗ್ಗೆ ವರದಿಯಾಗಿದೆ.!

ಚಂದ್ರಿಕಾ ತಂದೆ ಹನುಮಪ್ಪ ಹಾದಿಮನಿ (19) ಕಾಣೆಯಾದ ಯುವತಿ. ಯುವತಿಯ ತಂದೆ ಹನುಮಪ್ಪ ಹಾದಿಮನಿ ಅವರು ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಟ್ಟೆ ತೊಳೆಯುವ ಸಾಬೂನು ತರುವುದಾಗಿ ಮನೆಯಿಂದ ಆಚೆ ಹೋದವಳು ಹಿಂತಿರುಗಿ ಬಂದಿರುವುದಿಲ್ಲ ಎಂದು ದೂರಿನಲ್ಲಿ ತಂದೆ ಸ್ಪಷ್ಟಪಡಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಕಾಣೆಯಾದ ಯುವತಿ ಕಪ್ಪು ಬಣ್ಣದ ಲಗ್ಗಿನ್ಸ್, ಕೆಂಪು ಬಣ್ಣದ ಟಾಪ್, ಬಿಳಿ ಬಣ್ಣದ ವೇಲ್ ಧರಿಸಿರುತ್ತಾಳೆ. ಸುಮಾರು ನಾಲ್ಕುವರೆ ಅಡಿ ಎತ್ತರವಿದ್ದು, ಸಾಧಾರಣ ಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾಳೆ. ಯುವತಿ ಎಲ್ಲಿಯಾದರೂ ಪತ್ತೆಯಾದಲ್ಲಿ ಕುಷ್ಟಗಿ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.!!