ಕೊಪ್ಪಳ ಜಿಲ್ಲೆಯಲ್ಲಿ 515 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು..!

 

ಶರಣಪ್ಪ ಕುಂಬಾರ

ಕೃಷಿ ಪ್ರಿಯ ನ್ಯೂಸ್ |

ಕೊಪ್ಪಳ : ಇಂದು ಆರಂಭಗೊಂಡ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮೊದಲ ಪತ್ರಿಕೆಗೆ 515 ವಿದ್ಯಾರ್ಥಿಗಳು ಗೈರಾಗಿದ್ದಾರೆ..!

ಜಿಲ್ಲೆಯ ಒಟ್ಟು 79 ಪರೀಕ್ಷಾ ಕೇಂದ್ರಗಳಲ್ಲಿ ಜರುಗಿದ ಪರೀಕ್ಷೆಯಲ್ಲಿ ಒಟ್ಟು 23341 ವಿದ್ಯಾರ್ಥಿಗಳಲ್ಲಿ 515 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಮೊದಲ ಕನ್ನಡ ಪತ್ರಿಕೆ ಪರೀಕ್ಷೆ ಅತ್ಯಂತ ಶಾಂತಯುತವಾಗಿ ಜರುಗಿತು ಎಂದು ಶಿಕ್ಷಣ ಇಲಾಖೆ ಮೂಲಗಳು ಸ್ಪಷ್ಟಪಡಿಸಿವೆ..!!