ಸಂಗಮೇಶ ಮುಶಿಗೇರಿ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ಜಿಲ್ಲೆಯ ಕುಷ್ಟಗಿ ತಾಲೂಕಿನ ಕಡೇಕೊಪ್ಪ ತಾಂಡಾದಲ್ಲಿ ಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ ಘಟನೆ ಜರುಗಿದೆ..!
ಕುಷ್ಟಗಿ ತಾಲೂಕಿನ ಕಡೇಕೊಪ್ಪ ತಾಂಡಾದ ಕುಬೇರಪ್ಪ ಶಿವಪ್ಪ ಪವಾರ ಬಂದಿತ ವ್ಯಕ್ತಿ. ಆರೋಪಿತನು ತನ್ನ ಮನೆಯ ಮುಂದಿನ ಸಾರ್ವಜನಿಕ ಸ್ಥಳದಲ್ಲಿ ಬಟ್ಟಿ ಸಾರಾಯಿ ಮಾರಾಟ ಮಾಡುತ್ತಿರುವುದನ್ನು ಖಚಿತಪಡಿಸಿಕೊಂಡ ಪೊಲೀಸರು
4 ಲೀಟರ್ ಸಾರಾಯಿ ಸೇರಿದಂತೆ 200 ರೂಪಾಯಿಗಳನ್ನು ವಶಪಡಿಸಿಕೊಂಡಿದ್ದಾರೆ. ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..!!
(ಸಂಗ್ರಹ ಚಿತ್ರಗಳು)