ಸಂಗಮೇಶ ಮುಶಿಗೇರಿ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ಜಿಲ್ಲೆಯ ಕುಷ್ಟಗಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಸಂಭಾವ್ಯ ಅಭ್ಯರ್ಥಿ ಹಾಗೂ ಕಾರ್ಯಕರ್ತರ ಮೇಲೆ ಚುನಾವಣೆ ನೀತಿಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ..!
ಜಿಲ್ಲೆಯ ಕುಷ್ಟಗಿ ತಾಲೂಕಿನ ಹುಲಿಯಾಪುರ ಗ್ರಾಮದ ಶ್ರೀ ವಿಶ್ವನಾಥ ದೇವಸ್ಥಾನದಲ್ಲಿ ದಿನಾಂಕ 4-4-2023 ರಂದು ಚುನಾವಣಾ ಅಧಿಕಾರಿಗಳಿಂದ ಯಾವುದೇ ಪರವಾನಗಿ ಪಡೆಯದೆ ನೀತಿಸಂಹಿತೆ ಉಲ್ಲಂಘಿಸಿ, ಚುನಾವಣೆ ಪ್ರಚಾರ ಕೈಗೊಂಡಿರುವ ಬಿಜೆಪಿ ಸಂಭಾವ್ಯ ಅಭ್ಯರ್ಥಿ ದೊಡ್ಡನಗೌಡ ಪಾಟೀಲ ಸೇರಿದಂತೆ ಕಾರ್ಯಕರ್ತರ ಮೇಲೆ Flying Squad Team ಪ್ರಕರಣ ದಾಖಲಿಸಿದೆ. ಈ ಕುರಿತು ಪತ್ರಿಕೆಗೆ ಚುನಾವಣಾ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ..!!