ಶರಣಪ್ಪ ಕುಂಬಾರ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ಜಿಲ್ಲೆಯ ಕುಷ್ಟಗಿ ವಿಧಾನಸಭೆಯ ಈ ಬಾರಿಯ ಫಲಿತಾಂಶ ವಿಭಿನ್ನವಾಗಿರುತ್ತದೆ ಎಂದು ಕೆ.ಆರ್.ಪಿ.ಪಿ ಯ ಅಭ್ಯರ್ಥಿ ಸಿ.ಎಂ ಹಿರೇಮಠ ಅಭಿಪ್ರಾಯ ವ್ಯಕ್ತಪಡಿಸಿದರು..!
ಕುಷ್ಟಗಿ ತಹಸೀಲ್ದಾರ ಕಚೇರಿಯಲ್ಲಿಂದು ಉಮೇದುವಾರಿಕೆ ಬಯಸಿ, ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದರು. ಕೃಷ್ಣಾ ನದಿ ನೀರನ್ನು ನೀರಾವರಿಗೆ ಬಳಸಲು ಸಮಗ್ರ ಯೋಜನೆ ಹಾಕಿಕೊಳ್ಳಲಾಗುವುದು. ಈಗಾಗಲೇ ಎಲ್ಲಾ ರಾಜಕೀಯ ಪಕ್ಷಗಳು ಕೃಷ್ಣಾ ನೀರು ಹರಿಸುವುದಾಗಿ ಸುಳ್ಳು ಹೇಳಿಕೊಂಡು ರಾಜಕೀಯದಲ್ಲಿ ತೊಡಗಿಕೊಂಡಿವೆ. ಆದರೆ, ಕೆ.ಆರ್.ಪಿ.ಪಿ ಪಕ್ಷ ಅಧಿಕಾರಕ್ಕೆ ಬಂದರೆ, ರೈತರಿಗೆ 15 ಸಾವಿರ ವಿತರಣೆ ಸೇರಿದಂತೆ ಗ್ರಾಮೀಣ ಪ್ರದೇಶದ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದಾಗಿ ಭರವಸೆ ನೀಡಿದರು..!!