ಶರಣಪ್ಪ ಕುಂಬಾರ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ಜಿಲ್ಲೆಯ ಗಂಗಾವತಿ ಗ್ರಾಮೀಣ ಠಾಣೆಯ ಪೊಲೀಸರು ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯಿಂದ 60,50,000=00 ರೂಪಾಯಿಗಳನ್ನು ವಶಪಡಿಸಿಕೊಂಡಿರುವ ಪ್ರಸಂಗ ಜರುಗಿದೆ..!
ಕಲಬುರಗಿ ಜಿಲ್ಲೆಯ ಕೊತನೂರು ರಸ್ತೆಯ ಹಗರಗ ಗ್ರಾಮದ ವಿಜಯಕುಮಾರ ತಂದೆ ಲಕ್ಷ್ಮೀಕಾಂತ (21) ಹಣ ಸಾಗಿಸುತ್ತಿದ್ದ ವ್ಯಕ್ತಿ. ಯಾವುದೇ ದಾಖಲೆಗಳು ಇಲ್ಲದೆ ಹಣ ಸಾಗಿಸುತ್ತಿದ್ದ ಮಾಹಿತಿ ಹಿನ್ನಲೆಯಲ್ಲಿ ಗಂಗಾವತಿ ಗ್ರಾಮೀಣ ಠಾಣೆಯ ಪೊಲೀಸರು ಹಣ ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರ ಈ ಯಶಸ್ವಿ ಕಾರ್ಯಾಚರಣೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಅಭಿನಂದಿಸಿದ್ದಾರೆ..!!