ಸಿಡಿಲಿನಿಂದ ಮೃತ ಕುಟುಂಬಕ್ಕೆ ಜಿಲ್ಲಾಧಿಕಾರಿ ಭೇಟಿ..!

 

ಶರಣಪ್ಪ ಕುಂಬಾರ

ಕೃಷಿ ಪ್ರಿಯ ನ್ಯೂಸ್ |

ಕೊಪ್ಪಳ : ಸಿಡಿಲಿನಿಂದ ಮೃತಪಟ್ಟಿದ್ದ ಜಿಲ್ಲೆಯ ಕುಷ್ಟಗಿ ತಾಲೂಕಿನ ಹನಮನಾಳ ಹೋಬಳಿಯ ಶ್ಯಾಡಲಗೇರಿ ಗ್ರಾಮದ ಶಾಂತಮ್ಮ ಕಮತರ ಕುಟುಂಬಕ್ಕೆ ಜಿಲ್ಲಾಧಿಕಾರಿ ಸುಂದರೇಶಬಾಬು ಅವರು ಭೇಟಿ ನೀಡಿ, ಸಾಂತ್ವನ ಹೇಳಿದ್ದಾರೆ..!

ಮೃತ ಮಹಿಳೆಯ ನೇರ ವಾರುಸದಾರ ಪರಸಪ್ಪ ದುರಗಪ್ಪ ಕಮತರ ಅವರಿಗೆ ಸರಕಾರ ನೀಡುವ 5 ಲಕ್ಷ ರೂಪಾಯಿಗಳ ಪರಿಹಾರ ಮೊತ್ತದ ಆದೇಶ ಪ್ರತಿ ನೀಡಿದ್ದಾರೆ. ಅಲ್ಲದೆ, ಗಾಯಗೊಂಡವರಿಗೂ ಕೂಡಾ ಧೈರ್ಯ ತುಂಬಿ, ಟೆಗರು ಕುರಿಗಳನ್ನು ಕಳೆದುಕೊಂಡ ನೈನಾಪೂರು ಕುಟುಂಬಕ್ಕೆ ಸಂಬಂಧಿಸಿದ ಇಲಾಖೆಯಿಂದ ಪರಿಹಾರಕ್ಕಾಗಿ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ತಹಸೀಲ್ದಾರ ರಾಘವೇಂದ್ರರಾವ್, ಕಂದಾಯ ನಿರೀಕ್ಷಕ ಅಬ್ದುಲ್ ರಜಾಕ್, ವಿಎ ಪ್ರಸನ್ನ ಕುಲಕರ್ಣಿ ಸೇರಿದಂತೆ ಕಂದಾಯ ಇಲಾಖೆ ಸಿಬ್ಬಂದಿ ವರ್ಗ ಹಾಜರಿದ್ದರು..!!