ಶರಣಪ್ಪ ಕುಂಬಾರ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕೊಪ್ಪಳಕ್ಕೆ ಆಗಮಿಸಲಿದ್ದಾರೆ ಎಂದು ಜೆಡಿಎಸ್ ಪಕ್ಷದ ಅಭ್ಯರ್ಥಿ ಸಿ.ವಿ.ಚಂದ್ರಶೇಖರ ತಿಳಿಸಿದರು..!
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ 2 ರಂದು ಕೊಪ್ಪಳ ನಗರದ ತಾಲೂಕಾ ಕ್ರೀಡಾಂಗಣದಲ್ಲಿನ ಬೃಹತ್ ವೇದಿಕೆಯಲ್ಲಿ ಭಾಗವಹಿಸಲಿದ್ದಾರೆ. ಇವರ ಜೊತೆಗೆ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ಭಾಗವಹಿಸಲಿದ್ದಾರೆ. ಜೆಡಿಎಸ್ ಪಕ್ಷದ ಪ್ರಣಾಳಿಕೆ ಜೊತೆಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ರೈತ ಹಾಗೂ ಜನಪರ ಕಾರ್ಯಕ್ರಮಗಳನ್ನು ಮೆಚ್ಚಿಕೊಂಡು ಈಗಾಗಲೇ ಕ್ಷೇತ್ರದ 180 ಜನ ಗ್ರಾಮ ಪಂಚಾಯಿತಿ ಸದಸ್ಯರು ಪಕ್ಷ ಸೇರ್ಪಡೆಯಾಗಿದ್ದಾರೆ. ಪ್ರತಿ ಗಾಮಕ್ಕೆ ಭೇಟಿ ನೀಡಿದಾಗ ಜನ ಸಾಗರ ಹರಿದು ಬರುತ್ತಿದೆ. ಈ ಬಾರಿಯ ಗೆಲವು ನಿಶ್ಚಿತವಾಗಿದೆ. ಹತ್ತು ವರ್ಷಗಳ ಕಾಲ ಹಾಲಿ ಶಾಸಕರ ಆಡಳಿತಕ್ಕೆ ಜನರು ಬೇಸತ್ತುಹೋಗಿದ್ದಾರೆ. ಎರಡು ರಾಷ್ಟ್ರೀಯ ಪಕ್ಷಗಳ ಆಡಳಿತದಿಂದ ಜನ ರೋಸಿ ಹೋಗಿದ್ದಾರೆ. ಹೊಸ ಮುಖಕ್ಕೆ ಅವಕಾಶ ನೀಡಬೇಕೆಂಬ ಅಭಿಪ್ರಾಯ ಈಗಾಗಲೇ ವ್ಯಕ್ತವಾಗುತ್ತಿದೆ. ಸಿವಿಸಿ ಗೆಲುವು ನಿಶ್ಚಿತವಾಗಿದ್ದರಿಂದ ವಿರೋಧಿಗಳು ಕುತಂತ್ರಗಳನ್ನು ಆರಂಭಿಸಿದ್ದಾರೆ ಎಂದರು. ಜೆಡಿಎಸ್ ಜಿಲ್ಲಾಧ್ಯಕ್ಷ ವೀರೇಶ ಮಹಾಂತಯ್ಯನಮಠ ಸೇರಿದಂತೆ ಕರಾಟೆ ಮೌನೇಶ ಪ್ರಮುಖರು ಸುದ್ದಿ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು..!!