‘ಅಮೃತಾ ಬಳಿಗಾರ’ ಕುಷ್ಟಗಿ ತಾಲೂಕಿಗೆ ಪ್ರಥಮ..!

 

ಶರಣಪ್ಪ ಕುಂಬಾರ

ಕೃಷಿ ಪ್ರಿಯ ನ್ಯೂಸ್ |

ಕೊಪ್ಪಳ : ಜಿಲ್ಲೆಯ ಕುಷ್ಟಗಿ ಪಟ್ಟಣದ ಕ್ರೈಸ್ತ ದ ಕಿಂಗ್ ಪ್ರೌಢ ಶಾಲೆಯ ವಿದ್ಯಾರ್ಥಿನಿ ಅಮೃತಾ ಬಾಲಾಜಿ ಬಳಿಗಾರ ಎಂಬ ವಿದ್ಯಾರ್ಥಿನಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625 ಅಂಕಗಳಿಗೆ 621 ಅಂಕಗಳನ್ನು ಪಡೆಯುವ ಮೂಲಕ ತಾಲೂಕಿಗೆ ಪ್ರಥಮ ಸ್ಥಾನ ಎಂಬ ‘ಕೀರ್ತಿ’ ತನ್ನದಾಗಿಸಿಕೊಂಡಿದ್ದಾಳೆ..!

ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ವಿದ್ಯಾರ್ಥಿನಿ ಕೀರ್ತಿ ಪೂಜಾರ (619), ತಳುವಗೇರಾ ಆದರ್ಶ ವಿದ್ಯಾಲಯದ ವಿದ್ಯಾರ್ಥಿನಿ ಹರ್ಷಿತಾ ಗುಡೂರು (618), ಹಿರೇಮನ್ನಾಪೂರು ಶ್ರೀ ಗವಿಸಿದ್ಧೇಶ್ವರ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸೌಂದರ್ಯ ಜಗ್ಗಲ (615) ಹಾಗೂ ತಳುವಗೇರಾ ಆದರ್ಶ ವಿದ್ಯಾಲಯದ ವಿದ್ಯಾರ್ಥಿನಿ ಕೀರ್ತಿ ಕಟ್ಟಿಮನಿ (614) ಅಂಕಗಳನ್ನು ಪಡೆದು ತಾಲೂಕಿನ ಕೀರ್ತಿಗೆ ಪಾತ್ರರಾಗಿದ್ದಾರೆ. ಅಲ್ಲದೆ, ತಾಲೂಕಿನ 12 ಶಾಲೆಗಳು ಶೇಕಡಾ ನೂರಕ್ಕೆ ನೂರರಷ್ಟು ಫಲಿತಾಂಶ ಪಡೆದುಕೊಂಡಿವೆ ಎಂದು ಹೆಮ್ಮೆ ವ್ಯಕ್ತಪಡಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಂದ್ರ ಕಾಂಬಳೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ..!!