ಸಂಗಮೇಶ ಮುಶಿಗೇರಿ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ಜಿಲ್ಲೆಯ ಕುಷ್ಟಗಿ ತಾಲೂಕಿನ ಕಲಕೇರಿ ಗ್ರಾಮದ ಬಳಿ ಜರುಗಿದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂಪಾಯಿಗಳನ್ನು ಘೋಷಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಮಾನವೀಯತೆ ಮೆರೆದಿದ್ದಾರೆ..!
ಟ್ವಿಟ್ ಮಾಡಿದ ಸಿಎಂ ಸಿದ್ದರಾಮಯ್ಯ ಅವರು ದುರ್ಘಟನೆಯ ಸುದ್ದಿ ಕೇಳಿ ಎದೆ ನಡುಗಿ ಹೋಗಿತು ಎಂದು ಅಭಿಪ್ರಾಯ ವ್ಯಕ್ತಪಡಿಸಿ, ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಅಲ್ಲದೆ, ಸರಕಾರದಿಂದ ಮೃತ ಕುಟುಂಬಸ್ಥರಿಗೆ ತಲಾ ಎರಡು ಲಕ್ಷ ರೂಪಾಯಿಗಳನ್ನು ಪರಿಹಾರ ಘೋಷಿಸಿದ್ದಾರೆ. ಅಪಘಾತಗಳಿಗೆ ಅತಿ ವೇಗದ ಜೊತೆಗೆ ಅಜಾಗೃತೆ ಕಾರಣವಾಗುತ್ತದೆ. ಜಾಗೃತಿ ಮುಖ್ಯ ಎಂದಿದ್ದಾರೆ..!!