ಸಂಗಮೇಶ ಮುಶಿಗೇರಿ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ಜಿಲ್ಲೆಯ ಕುಷ್ಟಗಿ ತಾಲೂಕಿನ ಮೆಣಸಗೇರಿ ಹೊರವಲಯದಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಗುಂಪಿನ ಮೇಲೆ ಪೊಲೀಸರು ದಾಳಿ ಮಾಡಿ 13 ಜನರನ್ನು ಬಂಧಿಸಿ, 1,61,680 ರೂಪಾಯಿಗಳನ್ನು ವಶಕ್ಕೆ ಪಡೆದ ಘಟನೆ ಜರುಗಿದೆ..!
ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಜೂಜುಕೋರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರು, ಕುರುಗೋಡು, ಇಳಕಲ್, ಗಜೇಂದ್ರಗಡ, ಹುನಗುಂದ, ಬಳ್ಳಾರಿ, ತಾವರಗೇರಾ ಹಾಗೂ ಯಲಬುರ್ಗಾ ಮೂಲದವರು ಬಂಧಿತ ಆರೋಪಿಗಳಾಗಿದ್ದಾರೆ. ಕುಷ್ಟಗಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ..!!