ಸಂಗಮೇಶ ಮುಶಿಗೇರಿ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : 2022-23 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ, ಪೂರಕ ಪರೀಕ್ಷೆ ಬರೆಯಲು ಎರಡನೇ ಬಾರಿಗೆ ನೋಂದಣಿಗೆ ಅವಕಾಶ ನೀಡಲಾಗಿದೆ.!
ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ದೇಶಕರ ಆದೇಶದ ಮೇರೆಗೆ ಇದೇ ಆಗಸ್ಟ್ 21 ರಿಂದ ಸೆಪ್ಟೆಂಬರ್ 2ರ ವರೆಗೆ ಜಿಲ್ಲೆಯ ಕುಷ್ಟಗಿ ಪಟ್ಪಣದ ಬಾಲಕರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯ ಎರಡನೇ ಪೂರಕ ಪರೀಕ್ಷೆ ನಡೆಯಲಿದ್ದು, ಈ ಕಾಲೇಜಿನಲ್ಲಿ ಕಳೆದ ಎರಡು ವರ್ಷಗಳಲ್ಲಿ ಅನುತ್ತೀರ್ಣರಾದ ಸುಮಾರು 451 ಮಕ್ಕಳಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶವಿದೆ. ಇದು ವಿಶೇಷ ಪರೀಕ್ಷೆಯಾಗಿದ್ದು ಉತ್ತೀರ್ಣರಾಗಲು ಮತ್ತು ವಿದ್ಯಾಭ್ಯಾಸ ಮುಂದುವರಿಸಲು ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಅನುಕೂಲ ಕಲ್ಪಿಸಲಾಗಿದೆ.
ಪರೀಕ್ಷೆಗೆ ಶುಲ್ಕ ಪಾವತಿಸುವವರು ಆಗಸ್ಟ್ 10 ರ ಒಳಗೆ ಕಾಲೇಜಿಗೆ ಬಂದು ಪರೀಕ್ಷಾ ಶುಲ್ಕ ಪಾವತಿಸಬೇಕು ಎಂದು ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.!!