ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ಕುಷ್ಟಗಿ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಮುಖ್ಯಶಿಕ್ಷಕರಿಗೆ ಆಡಳಿತಾತ್ಮಕ ಮತ್ತು ಮಾಹಿತಿ ಹಕ್ಕು ಕಾಯ್ದೆ ಕುರಿತು ಅರಿವು ಮೂಡಿಸಲು ಒಂದು ದಿನದ ಕಾರ್ಯಾಗಾರವನ್ನು ಆ.12ರಂದು ಶನಿವಾರ ಬೆಳಿಗ್ಗೆ 10 ಗಂಟೆಗೆ ಪಟ್ಟಣದ ಗುರುಭವನದಲ್ಲಿ ಹಮ್ಮಿಕೊಳ್ಳಲಾಗಿದೆ.!
ಶಾಲಾ ಶಿಕ್ಷಣ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘ, ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ಸಂಘಗಳ ತಾಲ್ಲೂಕಾ ಘಟಕ ಸಹಯೋಗದಲ್ಲಿ ನಡೆಯುವ ಈ ಕಾರ್ಯಗಾರವನ್ನು ಶಾಸಕ ದೊಡ್ಡನಗೌಡ. ಹೆಚ್. ಪಾಟೀಲ ಅವರು ಉದ್ಘಾಟಿಸಲಿದ್ದಾರೆ.
ಜಿಲ್ಲಾ ತರಬೇತಿ ಕೇಂದ್ರ ಪ್ರಾಂಶುಪಾಲರು ಹಾಗೂ ವಿಷಯ ಸಂಪನ್ಮೂಲ ವ್ಯಕ್ತಿಗಳು ತರಬೇತಿ ನೀಡಲಿದ್ದಾರೆ. ತಾಲೂಕಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಮುಖ್ಯಶಿಕ್ಷಕರು ತಪ್ಪದೇ ಸರಿಯಾದ ಸಮಯಕ್ಕೆ ಕಾರ್ಯಗಾರದಲ್ಲಿ ಪಾಲ್ಗೊಳ್ಳುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಂದ್ರ ಕಾಂಬಳೆ ಅವರು ಆದೇಶ ಹೊರಡಿಸಿದ್ದಾರೆ.!!