ಸಂಗಮೇಶ ಮುಶಿಗೇರಿ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಕೂಡ ಸ್ಪರ್ಧೆಯೊಡ್ಡಲಿದೆ ಎಂದು ಪಕ್ಷ ಸಂಸ್ಥಾಪಕ ಗಂಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ಅವರು ತಿಳಿಸಿದ್ದಾರೆ.!
ಜಿಲ್ಲೆಯ ಕುಷ್ಟಗಿ ಪಟ್ಟಣಕ್ಕೆ ದಿನಾಂಕ 14-08-2023 ಸೋಮವಾರ ದಿನ ಸ್ಥಳೀಯ ಕೆಆರ್‌ಪಿಪಿ ಪಕ್ಷದ ತಾಲೂಕಾಧ್ಯಕ್ಷ ಸಿ.ಎಂ. ಹಿರೇಮಠ ನಿವಾಸಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಗೆಲ್ಲುವ ಕುದುರೆ ಹುಡುಕಿ ಲೋಕಸಭಾ ಚುನಾವಣೆಗೆ ಸ್ಪರ್ದಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಸ್ಪಷ್ಟಪಡಿಸಿದ ಶಾಸಕ ಗಾಲಿ ಜನಾರ್ಧನ ರೆಡ್ಡಿ, ಮುಂಬರುವ ದಿನಗಳಲ್ಲಿ ಪಕ್ಷ ಬಲವರ್ಧನೆಯನ್ನು ಮಾಡಲು ಎಲ್ಲಾ ತಾಲೂಕು ಹಾಗೂ ಗ್ರಾಮೀಣ ಪ್ರದೇಶಗಳಲ್ಲೂ ಪ್ರವಾಸ ಮಾಡುವುದಾಗಿ ತಿಳಿಸಿದ್ದಾರೆ.
ಕಡಿಮೆ ಅವಧಿಯಲ್ಲಿ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷ ಸಂಘಟಿಸಲು ಶ್ರಮಿಸಿದ ಸಾಮಾನ್ಯ ಕಾರ್ಯಕರ್ತರನ್ನು ಹಾಗೂ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದವರನ್ನು ಕಡೆಗಣಿಸುವುದಿಲ್ಲ. ಮುಂದಿನ ದಿನಗಳಲ್ಲಿ ಅವರಿಗೆ ಪಕ್ಷದಲ್ಲಿ ಗೌರವಯುತ ಸ್ಥಾನಮಾನ ನೀಡುವುದಾಗಿ ಭರವಸೆ ನೀಡಿದ್ದಾರೆ.
ಈ ವೇಳೆ ಕಲ್ಯಾಣ ರಾಜ್ಯ ಪ್ರಗತಿಪಕ್ಷದ ಜಿಲ್ಲಾಧ್ಯಕ್ಷ ಮನೋಹರಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಕರಿಯಣ್ಣ ಸಂಗಟಿ, ತಾಲೂಕ ಅಧ್ಯಕ್ಷ ಸಿ.ಎಂ ಹಿರೇಮಠ, ಶಶಿ ಕುಂಬಾರ ಹಾಗೂ ಪಕ್ಷದ ಕಾರ್ಯಕರ್ತರು ಹಾಜರಿದ್ದರು.!!