ಸಂಗಮೇಶ ಮುಶಿಗೇರಿ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ಸರ್ಕಾರಿ ಕಛೇರಿಗಳಲ್ಲಿ ಮಧ್ಯವರ್ತಿಗಳ ಗಾಳಕ್ಕೆ ಬೀಳದೆ, ನಮ್ಮ ಕೆಲಸಗಳನ್ನು ನಾವೇ ಮಾಡಿಕೊಳ್ಳುವ ಮೂಲಕ ಸ್ವಾವಲಂಬಿಗಳಾಗಬೇಕು ಎಂದು ತಹಸೀಲ್ದಾರ್ ಶೃತಿ ಮಳ್ಳಪ್ಪಗೌಡರ್ ಅವರು ಹೇಳಿದರು.!
ಅವರು ಜಿಲ್ಲೆಯ ಕುಷ್ಟಗಿ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಮಂಗಳವಾರ 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಸ್ತ್ರೀಸಬಲೀಕರಣಕ್ಕಾಗಿ ಸರ್ಕಾರಗಳು ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಸದೂಪಯೋಗ ಪಡಿಸಿಕೊಂಡು ಸಬಲರಾಗಿ ಸ್ವಾವಲಂಭಿಗಳಾಗಬೇಕು. ಮಹಾತ್ಮಾ ಗಾಂಧೀಜಿ ಅವರ ಗ್ರಾಮ ಸ್ವರಾಜ್ಯದ ಕನಸು ನನಸಾಗಿಸುವತ್ತ ಜಾರಿಗೆ ತಂದ ‘ಪಂಚಾಯತ್ ರಾಜ್’ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲು, ಹಳ್ಳಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅತ್ಯವಶ್ಯಕವಾಗಿದೆ ಎಂದು ತಿಳಿಸಿದರು.
ಶಾಸಕ ದೊಡ್ಡನಗೌಡ ಎಚ್.ಪಾಟೀಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಿಪಿಐ ಯಶವಂತ ಬಿಸನಹಳ್ಳಿ, ಬಿಇಓ ಸುರೇಂದ್ರ ಕಾಂಬಳೆ, ಗ್ರೇಡ್-2 ತಹಸೀಲ್ದಾರ್ ಮುರಳೀಧರ ಮುಕ್ತೇದಾರ, ಸಿಡಿಪಿಒ ಯಲ್ಲಮ್ಮ ಹಂಡಿ, ಪುರಸಭೆ ಸದಸ್ಯ ಕಲ್ಲೇಶ ತಾಳದ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಹಾಗೂ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿದ್ದ ಬೋದೂರಿನ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ತಾಲೂಕಾಡಳಿತ ವತಿಯಿಂದ ಗೌರವಿಸಲಾಯಿತು.ದೈಹಿಕ ಶಿಕ್ಷಣ ಪರಿವೀಕ್ಷಕ ನಾಗಪ್ಪ ಬಿಳಿಯಪ್ಪನವರ, ಬಿಆರ್.ಸಿ ಡಾ.ಜೀವನಸಾಬ ಬಿನ್ನಾಳ ಕಾರ್ಯಕ್ರಮ ನಿರ್ವಹಿಸಿದರು.
ಬಳಿಕ ವಿವಿಧ ಶಾಲೆಗಳ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.