ಕ್ಯಾದಿಗುಪ್ಪಾ ಬಳಿ ರಸ್ತೆ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

ಸಂಗಮೇಶ ಮುಶಿಗೇರಿ

ಕೃಷಿ ಪ್ರಿಯ ನ್ಯೂಸ್ |

ಕೊಪ್ಪಳ : ಜಿಲ್ಲೆಯ ಕುಷ್ಟಗಿ ತಾಲೂಕಿನ ರಾಷ್ಟ್ರೀಯ ಚತುಷ್ಪಥ ಹೆದ್ದಾರಿ ಕ್ಯಾದಿಗುಪ್ಪಾ ಗ್ರಾಮದ ಬಳಿ ರಸ್ತೆ ಅಪಘಾತವಾಗಿದೆ, ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವನಿಗೆ ರಕ್ತ ಗಾಯವಾದ ಘಟನೆ ಮಂಗಳವಾರ ಸಂಜೆ ನಡೆದಿದೆ.!

ಮೃತ ದುರ್ದೈವಿ ದೋಟಿಹಾಳ ಗ್ರಾಮದ ನಿವಾಸಿ ಸುಮಾರು 32 ವಯಸ್ಸಿನ ವೀರಭದ್ರಪ್ಪ ಶಿವಪುತ್ರಪ್ಪ ಬಳೆಗಾರ ಎಂದು ಗುರುತಿಸಲಾಗಿದೆ.
ತೀವ್ರ ಗಾಯಗೊಂಡಿರುವ ಕೇಸೂರು ಗ್ರಾಮದ ಮುಡಬಸಪ್ಪ ಎಂಬುವರನ್ನು ಕುಷ್ಟಗಿ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಗಿದೆ. ಕ್ಯಾದಿಗುಪ್ಪ ಗ್ರಾಮದ ಸಮೀಪ ರಾಷ್ಟ್ರೀಯ ಚತುಷ್ಪಥ ಹೆದ್ದಾರಿಯಲ್ಲಿ ಇಬ್ಬರೂ ಬೈಕ್ ಸವಾರಿ ಮಾಡಿಕೊಂಡು ಹೋಗುತಿದ್ದ ಸಂದರ್ಭದಲ್ಲಿ ಲಾರಿ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.
ಈ ಘಟನೆ ಕುಷ್ಟಗಿ ಪೊಲೀಸ್ ಠಾಣಾ ವ್ಯಪ್ತಿಯಲ್ಲಿ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.!!