ಬಸ್-ಬೈಕ್ ನಡುವೆ ರಸ್ತೆ ಅಪಘಾತ : ಸ್ಥಳದಲ್ಲೇ ಬೈಕ್ ಸವಾರ ಸಾವು

ಸಂಗಮೇಶ ಮುಶಿಗೇರಿ

ಕೃಷಿ ಪ್ರಿಯ ನ್ಯೂಸ್ |

ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲೂಕಿನ ಹಿರೇಮುಖರ್ತನಾಳ ಗ್ರಾಮದ ಬಳಿ ಸಾರಿಗೆ ಬಸ್ ಹಾಗೂ ಬೈಕ್ ನಡುವೆ ರಸ್ತೆ ಅಪಘಾತವಾಗಿದ್ದು, ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.!

ಮೃತ ದುರ್ದೈವಿ ಹಿರೆಮುಖರ್ತನಾಳ ಗ್ರಾಮದ 25 ವಯಸ್ಸಿನ ನಾಗರಾಜ ತಂದೆ ಕಂಬಣ್ಣ ಹಿರೆಮನ್ನಾಪುರ ಎಂದು ಗುರುತಿಸಲಾಗಿದೆ. ತಾವರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯ ಹಿರೇಮುಖರ್ತನಾಳ ಗ್ರಾಮದ ಹೊರವಲಯದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಕಲ್ಯಾಣ ಕರ್ನಾಟಕ ಸಾರಿಗೆ ಇಲಾಖೆಗೆ ಸೇರಿದ ತಾವರಗೇರಾ ರಾಂಪುರ ತಾವರಗೇರಾ ಮಾರ್ಗದ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾದ ಪರಿಣಾಮ ಯುವಕನ ತಲೆಗೆ ಬಲವಾದ ಪೆಟ್ಟುಬಿದ್ದು ಸ್ಥಳದಲ್ಲೇ ಅಸುನೀಗಿದ್ದಾನೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.!!

One thought on “ಬಸ್-ಬೈಕ್ ನಡುವೆ ರಸ್ತೆ ಅಪಘಾತ : ಸ್ಥಳದಲ್ಲೇ ಬೈಕ್ ಸವಾರ ಸಾವು

Comments are closed.