ಕೊಪ್ಪಳ ಜಿಲ್ಲಾ ನೂತನ ಜಿಲ್ಲಾಧಿಕಾರಿ ನಲಿನ್ ಅತುಲ್

ಕೃಷಿಪ್ರಿಯ ನ್ಯೂಸ್ |

ಕೊಪ್ಪಳ : ಕೊಪ್ಪಳ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಅವರು ವರ್ಗಾವಣೆಯಾಗಿದ್ದು, ಅವರ ಜಾಗಕ್ಕೆ ಐಎಎಸ್ ಅಧಿಕಾರಿ ನಲಿನ್ ಅತುಲ್ ಅವರು ಆಗಮಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನಲಿನ್ ಅತುಲ್ ಅವರು ಆಗಸ್ಟ್ 18, ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ಈ ಮೊದಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯ ಸಾಮಾಜಿಕ ಲೆಕ್ಕಪರಿಶೋಧನೆಯ ನಿರ್ದೇಶಕರಾಗಿದ್ದ ನಲಿನ್ ಅತುಲ್ ಅವರನ್ನು ನಿರ್ಗಮಿತ ಕೊಪ್ಪಳ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಅವರು ನೂತನ ಜಿಲ್ಲಾಧಿಕಾರಿ ಅವರಿಗೆ ಹೂಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.
2014ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ನಲಿನ್ ಅತುಲ್ ಅವರು ಮೂಲತಃ ಬಿಹಾರ ರಾಜ್ಯದವರಾಗಿದ್ದಾರೆ. ಈ ಮೊದಲು ಕಲಬುರಗಿ ವಿಭಾಗದ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತರಾಗಿ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಉಪ ಕಾರ್ಯದರ್ಶಿಯಾಗಿ, ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕರಾಗಿ ಸೇವೆ ಸಲ್ಲಿಸಿದ್ದಾರೆ.
ಈ ವೇಳೆ ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಇತರರಿದ್ದರು.