ಮುನೇತ್ರ
ಕೃಷಿ ಪ್ರಿಯ ನ್ಯೂಸ್ |
ಕೊಪ್ಪಳ : ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸೇವಾ ಬದ್ಧತೆ ಮೂಡಿಸಲು ಹಾಗೂ ಪರಿಪೂರ್ಣ ವ್ಯಕ್ತಿತ್ವ ವಿಕಸನ ಹೊಂದಲು ರಾಷ್ಟ್ರೀಯ ಸೇವಾ ಯೋಜನೆ ಶಿಬಿರ ನಡೆಸಲಾಗುತ್ತದೆ ಎಂದು ಪ್ರಾಚಾರ್ಯ ಡಾ.ಎಸ್.ವಿ.ಡಾಣಿ ಹೇಳಿದರು.
ಜಿಲ್ಲೆಯ ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾನಕಲಕೇರಿ ಗ್ರಾಮದಲ್ಲಿ ಕುಷ್ಟಗಿ ಸರಕಾರಿ ಪದವಿ ಕಾಲೇಜಿನಿಂದ ದಿನಾಂಕ 28-08-2023 ಸೋಮವಾರ ಹಮ್ಮಿಕೊಂಡಿದ್ದ ಎನ್‌ಎಸ್‌ಎಸ್ ಶಿಬಿರದಲ್ಲಿ ಧ್ವಜಾರೋಹಣ ನೆರೆವೇರಿಸಿ ಮಾತನಾಡಿ, ಪ್ರಸ್ತುತ ಸಂದರ್ಭಗಳಲ್ಲಿ ವಿದ್ಯಾರ್ಥಿಗಳಿಗೆ ಸಾಮಾಜಿಕ ಕಳಕಳಿ, ಸೌಹಾರ್ದತೆ, ಪರಸ್ಪರ ಅರ್ಥೈಸಿಕೊಳ್ಳುವುದು, ಗೌರವಿಸುವುದು ಮುಂತಾದ ಮೌಲ್ಯಗಳನ್ನು ತಿಳಿಸಿಕೊಡುವ ಅಗತ್ಯವಿದೆ. ಹೀಗಾಗಿ ಪ್ರತಿಯೊಬ್ಬ ಶಿಬಿರಾರ್ಥಿ, ಶಿಬಿರದ ಸಂಪೂರ್ಣ ಸದುಪಯೋಗ ಪಡೆದುಕೊಂಡು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಗ್ರಾಮೀಣ ಪ್ರದೇಶಗಳು ಸ್ವಚ್ಛತೆ ಕಾಪಾಡಿಕೊಳ್ಳಲು ಹಾಗೂ ಅಭಿವೃದ್ಧಿ ಹೊಂದಲು ಎನ್ನೆಸ್ಸೆಸ್ ಕಾರ್ಯಕ್ರಮಗಳು ಪೂರಕವಾಗಿವೆ. ಗ್ರಾಮಸ್ಥರು ಶಿಬಿರದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಸಹಕಾರ ನೀಡಬೇಕು. ಅದೇರೀತಿ ಶಿಬಿರಾರ್ಥಿಗಳು ಗ್ರಾಮಸ್ಥರ ವಿಶ್ವಾಸ ಪಡೆದುಕೊಂಡು ಅವರಿಗೆ ಸ್ವಚ್ಛತೆ, ನೈರ್ಮಲ್ಯ, ಬಾಲ್ಯವಿವಾಹ ಹೀಗೆ ನಾನಾ ವಿಷಯಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.
ಎನ್ನೆಸ್ಸೆಸ್ ಯೋಜನಾಧಿಕಾರಿ ಭೋಜರಾಜ್ ಮಾತನಾಡಿದರು. ಬಿಜಕಲ್ಲ ಗ್ರಾಪಂ ಅಧ್ಯಕ್ಷ ಗೌಡಪ್ಪಗೌಡ ಕಂದಗಲ್ಲ, ಮುಖ್ಯಶಿಕ್ಷಕಿ ರೇಣುಕಾ ಜೂಲಕಟ್ಟಿ, ಪಿಡಿಒ ಆನಂದರಾವ್ ಕುಲಕರ್ಣಿ, ಗ್ರಾಪಂ ಸದಸ್ಯ ವಸಂತ ಟಕ್ಕಳಕಿ, ಸಂಗನಗೌಡ ನೀಲನಗೌಡ, ದೊಡ್ಡಪ್ಪ ಕಂದಕೂರ, ಉಪನ್ಯಾಸಕರಾದ ಅಶೋಕ ಕೆಂಚರಡ್ಡಿ, ರವಿ, ವಿದ್ಯಾ ಗೋಟೂರು, ರಾಜಶೇಖರ ಕಲಕಬಂಡಿ, ಭೀಮಣ್ಣ, ಮಹ್ಮದ್ ಹಫೀಜುಲ್ಲಾ, ಶೇಖರಪ್ಪ, ಶಿವಪುತ್ರಪ್ಪ, ಹನುಮಗೌಡ, ಚೌಡಪ್ಪ ಇತರರಿದ್ದರು. ಶಂಕರ ಅಡವಿಬಾವಿ, ಮಹಾಂತೇಶ ಗವಾರಿ ಕಾರ್ಯಕ್ರಮ ನಿರ್ವಹಿಸಿದರು.