ಸಂಗಮೇಶ ಮುಶಿಗೇರಿ
ಕೃಷಿಪ್ರಿಯ ನ್ಯೂಸ್ |
ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಹೋಬಳಿ ವ್ಯಾಪ್ತಿಯ ಮ್ಯಾದರಡೊಕ್ಕಿ ಸೀಮೆಯ ಜಮೀನೊಂದರಲ್ಲಿ ಅಕ್ರಮವಾಗಿ ಗಾಂಜಾ ಬೆಳೆ ಬೆಳೆದಿದ್ದು, ಪೊಲೀಸರು ದಾಳಿ ಮಾಡಿ ವಶಪಡಿಸಿಕೊಂಡಿದ್ದಾರೆ. ತಾವರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಮಪ್ಪ ತಂ.ದೇವಪ್ಪ ಸಂಗನಾಳ ಎಂಬುವರಿಗೆ ಸೇರಿದ ಜಮೀನಿನಲ್ಲಿ ತೆಂಗಿನ ಮರಗಳಡಿ ಅಕ್ರಮವಾಗಿ ಗಾಂಜಾ ಬೆಳೆ ಬೆಳೆಯಲಾಗಿತ್ತು. ಇಂದು ಶನಿವಾರ, ಖಚಿತ ಮಾಹಿತಿ ಮೇರೆಗೆ ಪೊಲೀಸ್ ಇಲಾಖೆಯ ಗೆಜೆಟೆಡ್ ಅಧಿಕಾರಿಗಳು ಸಿಬ್ಬಂದಿ ಸಮೇತ ದಾಳಿ ಮಾಡಿ, 9.800 ಕೆ.ಜಿ. ತೂಕದ ರೂ.19,600 ಮೌಲ್ಯದ 5 ಹಸಿ ಗಾಂಜಾ ಗಿಡಗಳನ್ನು ವಶ ಪಡಿಸಿಕೊಂಡಿದ್ದಾರೆ. ಆರೋಪಿ ವಿರುದ್ಧ NDPS ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುವುದಾಗಿ ಸಿಪಿಐ ಯಶವಂತ ಬಿಸರಳ್ಳಿ ಅವರು ತಿಳಿಸಿದ್ದಾರೆ.