ಸಂಗಮೇಶ ಮುಶಿಗೇರಿ
ಕೃಷಿಪ್ರಿಯ ನ್ಯೂಸ್ |
ಕೊಪ್ಪಳ : ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ – ಹೊರಗುತ್ತಿಗೆ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಗವಿಸಿದ್ಧಪ್ಪ ಡಿ ಉಪ್ಪಾರ ಅವರು ಆಯ್ಕೆಯಾಗಿದ್ದಾರೆ.
ಜಿಲ್ಲೆಯ ಕುಷ್ಟಗಿ ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಯೋಗ ಶಾಲಾ ತಂತ್ರಜ್ಞ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಗವಿಸಿದ್ಧಪ್ಪ ಡಿ ಉಪ್ಪಾರ ಅವರು ಈ ಮೊದಲು ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಅವರ ಸಂಘಟನಾ ಚಾತುರ್ಯ ಹಾಗೂ ಕಾರ್ಯಚಟುವಟಿಕೆ ಗುರುತಿಸಿ ರಾಜ್ಯ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಇವರನ್ನು ಪ್ರಧಾನ ಕಾರ್ಯದರ್ಶಿಗಳಾಗಿ ಆಯ್ಕೆಯಾಗಿದ್ದಾರೆ. ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು, ಸ್ನೇಹಿತ ಬಳಗ ಹರ್ಷವ್ಯಕ್ತಪಡಿಸಿ ಅಭಿನಂದನೆಗಳನ್ನು ಸಲ್ಲಿಸುತಿದ್ದಾರೆ.